ರೈತರ ಸಾಲಮನ್ನಾ ಕುರಿತು ಸ್ಪೋಟಕ ಸುದ್ದಿ..! ಯಾವ ಪ್ರಮಾಣದಲ್ಲಿ ಸಾಲಮನ್ನಾ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್..

ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡುವುದಾಗಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಹೇಳುತ್ತಿದ್ದರೂ ಪ್ರಸಕ್ತ ಬಜೆಟ್‌ನಲ್ಲಿ ಸಹಕಾರ ಬ್ಯಾಂಕ್‌ಗಳು ಮತ್ತು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ರೈತರು ಮಾಡಿರುವ ಬೆಳೆಸಾಲ ಮಾತ್ರ ಮನ್ನಾ ಆಗಲಿದೆ.
ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಲು 60 ಸಾವಿರ ಕೋಟಿ ರೂಪಾಯಿಗೂ ಅಧಿಕ ಮೊತ್ತ ಅವಶ್ಯಕತೆ ಇದ್ದು, ರಾಜ್ಯದ ಆರ್ಥಿಕ ಪರಿಸ್ಥಿತಿಯಲ್ಲಿ ಇದು ಅಸಾಧ್ಯ. ಹೀಗಾಗಿ ಮೊದಲ ಹಂತದಲ್ಲಿ ರೈತರ ಬೆಳೆ ಸಾಲ ಮನ್ನಾ ಮಾಡಲು ಮತ್ತು ನಂತರದಲ್ಲಿ ಹಂತ ಹಂತವಾಗಿ ಇತರೆ ಸಾಲ ಮನ್ನಾ ಮಾಡಲು ತೀರ್ಮಾನಿಸಲಾಗಿದೆ. ರೈತರ ಸಾಲ ಮನ್ನಾ ಕುರಿತಂತೆ ಸಹಕಾರ ಬ್ಯಾಂಕ್‌ಗಳ ಅಭಿಪ್ರಾಯ ಪಡೆಯಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಜ್ಯದ ಎಲ್ಲಾ ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷರು ಮತ್ತು ನಿರ್ದೇಶಕರ ಸಭೆ ಕರೆದಿದ್ದು, ಈ ಸಭೆ ಬಳಿಕ ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ ಅವರು ಮೊದಲ ಹಂತದಲ್ಲಿ ರೈತರ ಬೆಳೆಸಾಲ ಮಾತ್ರ ಮನ್ನಾ ಮಾಡುವುದಾಗಿ ಹೇಳಿದ್ದಾರೆ.
ಇದಕ್ಕೂ ಮುನ್ನ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸೂಚನೆ ಮೇರೆಗೆ ಹಿಂದಿನ ಸರ್ಕಾರ ರೈತರ 50 ಸಾವಿರ ರೂ. ವರೆಗಿನ ಬೆಳೆ ಸಾಲ ಮನ್ನಾ ಮಾಡಿತ್ತು. ಇದಕ್ಕೆ ಇನ್ನೂ 7 ಸಾವಿರ ಕೋಟಿ ರೂ. ಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಮಧ್ಯೆ ಮಾರ್ಚ್ ಅಂತ್ಯದವರೆಗೆ ರೈತರು ಮಾಡಿದ ಎಲ್ಲಾ 10 ಸಾವಿರ ಕೋಟಿ ರೂ. ಮನ್ನಾ ಮಾಡಬೇಕು ಎಂದು ಸಹಕಾರ ಬ್ಯಾಂಕ್‌ಗಳು ಹೇಳಿವೆ. ಆದರೆ, ಸಾಲ ಮನ್ನಾ ಒಂದೇ ಪರಿಹಾರ ಅಲ್ಲ ಎಂಬುದೂ ನನಗೆ ಗೊತ್ತಿದೆ. ಇನ್ನೊಂದೆಡೆ ಸಾಲಮನ್ನಾಕ್ಕೆ ಸರ್ಕಾರ ಹಣ ಎಲ್ಲಿಂದ ತರುತ್ತದೆ ಎಂಬ ಚರ್ಚೆಯೂ ನಡೆಯುತ್ತಿದೆ. ಆದರೆ, ಯಾವುದೇ ಕಾರಣಕ್ಕೂ ರೈತರ ಸಾಲ ಮನ್ನಾ ಮಾಡುವುದರಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದರು. ಸಾಲ ಮನ್ನಾ ಯೋಜನೆ ಜಾರಿಗೆ ಹಲವಾರು ರೀತಿಯ ಮಾಹಿತಿ ಪಡೆಯಲು ಪ್ರಯತ್ನ ಮಾಡಲಾಗುತ್ತಿದೆ. ಸಹಕಾರ ಬ್ಯಾಂಕ್‌ಗಳು ಕೊಟ್ಟ ಮಾಹಿತಿಯನ್ನೂ ನಾನು ನೋಡಿದ್ದೇನೆ. ಯಾವುದೇ ಸಹಕಾರ ಬ್ಯಾಂಕ್‌ಗಳು ಸಾಲ ಮನ್ನಾಕ್ಕೆ ವಿರೋಧವಿಲ್ಲ. ಯಾವತ್ತು ಸಾಲ ಮನ್ನಾ ಘೋಷಣೆಯಾಗುತ್ತದೋ ಅದುವರೆಗಿನ ಸಾಲ ಮನ್ನಾ ಮಾಡಬೇಕು ಎಂದು ಹೇಳುತ್ತಿವೆ. ಸಹಕಾರ ಬ್ಯಾಂಕ್‌ಗಳವರು ಹೇಳಿದೆಲ್ಲವನ್ನೂ ಕೇಳಿಕೊಂಡಿದ್ದೇನೆ. ಸಾಲ ಮನ್ನಾ ಮಾಡುವಾಗ ಏನು ಮಾಡಬೇಕೋ ಅದನ್ನು ಮಾಡುತ್ತೇನೆ ಎಂದು ಹೇಳಿದರು.
Comments