ಬಜೆಟ್ ಮಂಡನೆ ಮಾಡೇ ಮಾಡ್ತೀವಿ : ಸಿಎಂ ಎಚ್’ಡಿಕೆ ಸ್ಪಷ್ಟನೆ

ಬಜೆಟ್ ಮಂಡನೆಯಲ್ಲಿ ಯಾವುದೇ ಗೊಂದಲಗಳಿಲ್ಲ. ಬಜೆಟ್ ಮಂಡನೆ ಮಾಡೇ ಮಾಡ್ತೀವಿ ಎಂದು ಸಿಎಂ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಇಂದು ಸಿಎಂ ಹೆಚ್.ಡಿ.ಕುಮಾರಸ್ವಾಮಿ ದಿನವಿಡೀ ಬಜೆಟ್ ಪೂರ್ವಭಾವಿ ಸಭೆಗಳನ್ನು ನಡೆಸಲಿದ್ದಾರೆ.
ಬೃಹತ್, ಮಧ್ಯಮ, ಸಣ್ಣ ಕೈಗಾರಿಕೆ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಹಕಾರ ಇಲಾಖೆ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ವಸತಿ ಇಲಾಖೆ, ಪೌರಾಡಳಿತ, ನಗರಾಭಿವೃದ್ಧಿ, ಬಂದರು, ಒಳನಾಡು ಜಲ ಸಾರಿಗೆ ಇಲಾಖೆ, ಇ-ಆಡಳಿತ ಇಲಾಖೆಗಳೊಂದಿಗೆ ಸರಣಿ ಸಭೆಗಳನ್ನು ನಡೆಸಲಿದ್ದಾರೆ. 10 ಇಲಾಖೆಗಳ ಜೊತೆ ಸಂಜೆ ತನಕವೂ ಸಿಎಂ ಸಭೆ ನಡೆಸಲಿದ್ದು, ಸಂಬಂಧಪಟ್ಟ ಇಲಾಖೆಗಳ ಸಚಿವರು, ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.
Comments