Breaking News : ಸಿದ್ದು ಆಪ್ತ ಅಧಿಕಾರಿಗಳಿಗೆ ಬಿಗ್ ಶಾಕ್ ಕೊಟ್ಟ ಸಿಎಂ ಎಚ್.ಡಿ.ಕುಮಾರಸ್ವಾಮಿ

ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಆಪ್ತರಾಗಿದ್ದ ಅಧಿಕಾರಿಗಳನ್ನು ಎತ್ತಂಗಡಿ ಮಾಡಲು ಮೈತ್ರಿ ಸರ್ಕಾರ ಸಿದ್ದತೆ ನಡೆಸಿದೆ ಎನ್ನಲಾಗಿದೆ.
ಈಗಾಗಲೇ ಬೆಂಗಳೂರು ಪಶ್ಚಿಮ ವಲಯ ಉಪವಿಭಾಗಾಧಿಕಾರಿ ಆಗಿದ್ದ ಕೆ.ಎಸ್. ಜಗದೀಶ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಸಿದ್ದರಾಮಯ್ಯ ಇನ್ನೊಬ್ಬ ಆಪ್ತರಾಗಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ದಯಾನಂದ್ ಅವರನ್ನೂ ವರ್ಗಾಯಿಸಲಾಗುವುದು ಎಂದು ಹೇಳಲಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿರುವ ಹರ್ಷ ಅವರನ್ನೂ ವರ್ಗಾಯಿಸಿ, ವಿಶುಕುಮಾರ್ ಅವರನ್ನು ಮತ್ತೆ ವಾರ್ತಾ ಇಲಾಖೆಗೆ ತರುವ ಪ್ರಯತ್ನ ನಡೆದಿದೆ ಎನ್ನಲಾಗಿದೆ.
Comments