ಜೆಡಿಎಸ್ ಗೆ ನೂತನ ರಾಜ್ಯಾಧ್ಯಕ್ಷರ ನೇಮಕ ಕುರಿತು ದೊಡ್ಡಗೌಡರ ಫೈನಲ್ ಡಿಸಿಶನ್..!!
ಮೈತ್ರಿ ಸರ್ಕಾರವನ್ನು ಸಮರ್ಪಕವಾಗಿ ನಡೆಸಿಕೊಂಡು ಹೋಗಬೇಕಿರುವ ಕಾರಣ ಕುಮಾರಸ್ವಾಮಿ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಬಿಡುಗಡೆ ಮಾಡುವ ಬಗ್ಗೆ ವಿಷಯ ಪ್ರಸ್ತಾಪವಾಯಿತು. ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರನ್ನೇ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಮುಂದುವರಿಸಲು ನಿರ್ಣಯ ಕೈಗೊಳ್ಳಲಾಗಿದೆ.
ಮಂಗಳವಾರ ಪಕ್ಷದ ಕಚೇರಿಯಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅಧ್ಯಕ್ಷತೆಯಲ್ಲಿ ನಡೆದ ಹಿರಿಯ ಮುಖಂಡರ ಸಭೆಯಲ್ಲಿ ಕುಮಾರಸ್ವಾಮಿ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಮುಂದುವರಿಸಲು ಬಗ್ಗೆ ನಿರ್ಧಾರ ಕೈಗೊಳ್ಳಲಾಯಿತು ಎಂದು ತಿಳಿದು ಬಂದಿದೆ. ಮುಂದಿನ ದಿನಗಳಲ್ಲಿ ಲೋಕಸಭೆ ಚುನಾವಣೆಗಿಂತ ಹೆಚ್ಚಾಗಿ ಸ್ಥಳೀಯ ಸಂಸ್ಥೆಯ ಚುನಾವಣೆಯನ್ನು ಎದುರಿಸಬೇಕಾಗಿದೆ. ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಪಕ್ಷವನ್ನು ಸಮರ್ಥವಾಗಿ ಮುನ್ನಡೆಸುವ ಮತ್ತು ಜನರನ್ನು ಸೆಳೆಯುವ ನಾಯಕತ್ವ ಗುಣಗಳನ್ನು ಕುಮಾರಸ್ವಾಮಿ ಅವರು ಹೊಂದಿದ್ದಾರೆ. ಹೀಗಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಮುಂದುವರಿಸುವುದು ಸೂಕ್ತ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾದ ಕಾರಣ ಕುಮಾರಸ್ವಾಮಿ ಅವರನ್ನು ಮುಂದುವರಿಸುವ ತೀರ್ಮಾನ ಕೈಗೊಳ್ಳಲಾಯಿತು ಎಂದು ಮೂಲಗಳು ತಿಳಿಸಿವೆ. ಮುಖ್ಯಮಂತ್ರಿ ಹುದ್ದೆಯ ಹೊಣೆಗಾರಿಕೆಯ ಜತೆಗೆ ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿಯೂ ಕುಮಾರಸ್ವಾಮಿಯ ಹೆಗಲ ಮೇಲಿದೆ. ಅಲ್ಲದೇ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸಹ ತಾವು ಪಕ್ಷದ ಅಧ್ಯಕ್ಷ ಸ್ಥಾನದ ಜತೆಗೆ ಮುಖ್ಯಮಂತ್ರಿಯಾಗಿ ಚುನಾವಣೆ ಎದುರಿಸಿದ್ದೆ ಎಂದು ಹೇಳಿದ್ದಾರೆ ಎನ್ನಲಾಗಿದೆ.
Comments