ಕಾಗಿನೆಲೆ ಶ್ರೀಗಳ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಎಚ್.ಡಿ. ಕುಮಾರಸ್ವಾಮಿ
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬೆಳ್ಳೂಡಿಯ ಕಾಗಿನೆಲೆ ಕನಕ ಗುರು ಪೀಠದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ನಿರಂಜಾನಂದಪುರಿ ಸ್ವಾಮೀಜಿ, ಸಾಕಷ್ಟು ಅಧಿಕಾರಿಗಳು ನನ್ನ ಬಳಿ ಬಂದು ವರ್ಗಾವಣೆ ಮಾಡುತ್ತಿರುವ ಕುರಿತು ಅಳಲು ತೋಡಿಕೊಂಡಿದ್ದಾರೆ. ಆದರೆ ಅಧಿಕಾರಿಗಳ ಹೆಸರನ್ನು ಬಹಿರಂಗ ಪಡಿಸುವುದಿಲ್ಲ ಎಂದು ಹೇಳಿದ್ದರು.
ಈ ಕುರಿತು ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು, ನಾವು ಯಾವ ಸಮುದಾಯದ ಅಧಿಕಾರಿಗಳನ್ನೂ ವರ್ಗ ಮಾಡಿಲ್ಲ. ಯಾರನ್ನೂ ವರ್ಗ ಮಾಡದೆ ನಾನೇನು ಉತ್ತರ ಕೊಡಲಿ ಎಂದು ಕಾಗಿನೆಲೆ ಶ್ರೀಗಳ ಆರೋಪಕ್ಕೆ ಸಿಎಂ ಎಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
Comments