ಮೈತ್ರಿ ಸರ್ಕಾರದಿಂದ ಮಹಿಳೆಯರಿಗೆ ಈ ಬಂಪರ್ ಆಫರ್..!!

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರದಿಂದ ವರಮಹಾಲಕ್ಷ್ಮಿ ಹಬ್ಬಕ್ಕೆ ಮಹಿಳೆಯರಿಗೆ ಬಂಪರ್ ಆಫರ್ ನೀಡಲು ಮುಂದಾಗಿದೆ. 9 ರಿಂದ 10 ಸಾವಿರ ರೂ. ಬೆಲೆ ಬಾಳುವ ಪ್ರಖ್ಯಾತ ಮೈಸೂರು ಸಿಲ್ಕ್ ಸೀರೆಯನ್ನು ಕೇವಲ 4,500 ರೂ.ಗಳಿಗೆ ಮಾರಾಟ ಮಾಡಲು ತೀರ್ಮಾನಿಸಿದೆ ಎನ್ನಲಾಗಿದೆ.
ರೇಷ್ಮೆ ಸಚಿವ ಸಾ.ರಾ. ಮಹೇಶ್ ಮೈಸೂರಿನಲ್ಲಿಂದು ಈ ವಿಚಾರ ತಿಳಿಸಿದ್ದು, ಮಧ್ಯಮ ವರ್ಗ ಹಾಗೂ ಬಡವರಿಗೂ ಮೈಸೂರು ಸಿಲ್ಕ್ ಸೀರೆ ಲಭ್ಯವಾಗಬೇಕು ಎಂಬ ಕಾರಣಕ್ಕೆ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
Comments