ವಿ.ಟಿ.ಯು ಅನಗತ್ಯ ದುಂದುವೆಚ್ಚಕ್ಕೆ ಕಡಿವಾಣ ಹಾಕಿದ ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ

ಬೆಳಗಾವಿಯ ವಿಟಿಯು ಆವರಣದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸಂಸ್ಥಾಪನೆ ದಿನಾಚರಣೆಗೆ ದುಂದುವೆಚ್ಚ ಮಾಡುವುದು ಸರಿ ಇಲ್ಲ. ಈ ಕುರಿತು ಪರಿಶೀಲಿಸಿ, ಅನವಶ್ಯಕವಾಗಿ ದುಂದುವೆಚ್ಚ ಮಾಡುವುದಕ್ಕೆ ಕಡಿವಾಣ ಹಾಕುವಂತೆ ಸೂಚಿಸಲಾಗುವುದು ಎಂದರು.
ಬಜೆಟ್ ಅಧಿವೇಶನದ ನಂತರ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳ ಸಭೆ ನಡೆಸಿ, ದುಂದುವೆಚ್ಚ ಮಾಡದಂತೆ ಸೂಚಿಸಲಾಗುವುದು. ಅಲ್ಲದೇ, ಬ್ರಿಟಿಷ್ ಸಂಸ್ಕೃತಿಗೆ ಅಂತ್ಯ ಹಾಡಲಾಗುವುದು. ವಿವಿಗಳನ್ನು ಎಲ್ಲರಿಗೂ ಮುಕ್ತಗೊಳಿಸಬೇಕಿದೆ ಎಂದರು.
Comments