ರೈತರು ಈ ಅವದಿಯಲ್ಲಿ ಪಡೆದ ಸಾಲವನ್ನು ಮನ್ನಾ ಮಾಡಲು ಮೈತ್ರಿ ಸರ್ಕಾರದಿಂದ ಗ್ರೀನ್ ಸಿಗ್ನಲ್..! ಸಮಿತಿಯ ಮಹತ್ವದ ನಿರ್ಧಾರ..!!

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಮಹತ್ವಾಕಾಂಕ್ಷಿ ಕಾರ್ಯಕ್ರಮ ರೈತರ ಸಾಲ ಮನ್ನಾ ಹಾಗೂ ಮೈತ್ರಿ ಸರ್ಕಾರದ ಚೊಚ್ಚಲ ಬಜೆಟ್‌ನ ನೈಜ ಸ್ವರೂಪ ನಿರ್ಧರಿಸುವ ಮಹತ್ವದ ಸಮನ್ವಯ ಸಮಿತಿ ಸಭೆ ಇಂದು ನಡೆಯಲಿದೆ.
ಜುಲೈ 5 ರಂದು ಮಂಡನೆಯಾಗಲಿರುವ ಕಾಂಗ್ರೆಸ್- ಜೆಡಿಎಸ್ ಮೈತ್ರಿಕೂಟ ಸರ್ಕಾರದ ಚೊಚ್ಚಲ ಬಜೆಟ್ ನಲ್ಲಿ ಸಹಕಾರಿ ಮತ್ತು ರಾಷ್ಟ್ರೀಯ ಬ್ಯಾಂಕ್ ಗಳಿಂದ ರೈತರು ಪಡೆದಿರುವ ಬೆಳೆ ಸಾಲಮನ್ನಾ, ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. 2009 ಏಪ್ರಿಲ್ 1 ರಿಂದ 2018 ಮೇ 31 ರವರೆಗೆ ಸಹಕಾರಿ ಮತ್ತು ರಾಷ್ಟ್ರೀಯ ಬ್ಯಾಂಕ್ ಗಳಲ್ಲಿ ರೈತರು ಪಡೆದುಕೊಂಡಿರುವ ಬೆಳೆಸಾಲವನ್ನು ಮನ್ನ ಮಾಡಲು ಮೈತ್ರಿಕೂಟ ಸರ್ಕಾರದ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಸಮ್ಮತಿಸಿವೆ ಎನ್ನಲಾಗಿದೆ. ಬೆಂಗಳೂರಿನ ಕುಮಾರಕೃಪ ಅತಿಥಿ ಗೃಹದಲ್ಲಿ ನಡೆದ ಸಾಮಾನ್ಯ ಕನಿಷ್ಠ ಕಾರ್ಯಕ್ರಮ (ಸಿ.ಎಂ.ಪಿ) ಸಭೆಯಲ್ಲಿ ಈ ಮಹತ್ವದ ತೀರ್ಮಾನವನ್ನು ಕೈಗೊಳ್ಳಲಾಯಿತು. ಸಂಸದ ಹಾಗೂ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಸಮಿತಿ ಅಧ್ಯಕ್ಷ ಎಂ.ವೀರಪ್ಪ ಮೊಯ್ಲಿ ನೇತ್ರತ್ವದಲ್ಲಿ ಸಭೆ ನಡೆಸಲಾಯಿತು. ಜೆಡಿಎಸ್ ತನ್ನ ಪ್ರಾಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ ಗರ್ಭಿಣಿ ಮಹಿಳೆಯರಿಗೆ ತಿಂಗಳ ಮಾಸಶನ 6500 ರೂ ನೀಡಲು ಸಮಿತಿ ಒಪ್ಪಿಗೆ ಸೂಚಿಸಿದೆ. ಇನ್ನು ಜಲಸಂಪನ್ಮೂಲ ಇಲಾಖೆಗೆ 5 ವರ್ಷದಲ್ಲಿ 1ಲಕ್ಷದ 35 ಸಾವಿರ ಕೋಟಿ ಅನುದಾನವನ್ನು ಮೀಸಲಿಡುವುದು, ಹಾಗೂ ಹಿಂದಿನ ಕಾಂಗ್ರೆಸ್ ಅವಧಿಯಲ್ಲಿ ನ ಕಾರ್ಯಕ್ರಮಗಳನ್ನು ಮುಂದುವರೆಸಲು ತೀರ್ಮಾನಿಸಲಾಯಿತು.
Comments