ಸಾಲಮನ್ನಾ ಮತ್ತು ಇತರ ಸೀಕ್ರೆಟ್ ರಿವೀಲ್ ಆಯ್ತು..! ಇಲ್ಲಿದೆ ಬಜೆಟ್ ನ ಮುಖ್ಯ ಅಂಶಗಳ ಕಂಪ್ಲೀಟ್ ಡೀಟೇಲ್ಸ್…
ಜೆಡಿಎಸ್ ಮತ್ತು ಕಾಂಗ್ರೆಸ್ ನೇತೃತ್ವದ ಮೈತ್ರಿ ಸರ್ಕಾರದ ಮೊದಲ ಬಜೆಟ್ ಇಂದು ಮಂಡನೆಯಾಗಲಿದೆ. ಇಡೀ ರಾಜ್ಯ ರಾಜಕಾರಣ ಮತ್ತು ಸಾರ್ವಜನಿಕರು ಕುತೂಹಲದಿಂದ ಎದುರು ನೋಡುತ್ತಿರುವುದು ರೈತರ ಸಾಲಮನ್ನಾ ಎಷ್ಟುಮಾಡುತ್ತಾರೆ.
ಹಣಕಾಸು ಖಾತೆಯ ಹೊಣೆ ಹೊತ್ತಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬೆಳಗ್ಗೆ 11.30ಕ್ಕೆ ಬಜೆಟ್ ಮಂಡಿಸಲಿದ್ದು, ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದ ಸಾಕಷ್ಟುಚರ್ಚೆಗೆ ನಾಂದಿ ಹಾಡಿರುವ ರೈತರ ಸಾಲಮನ್ನಾ ಬಗ್ಗೆ ಅಧಿಕೃತ ಘೋಷಣೆ ಹೊರಬೀಳುವುದು ನಿಶ್ಚಿತವಾಗಿದೆ. ಸಾಲಮನ್ನಾ ಸೇರಿದಂತೆ ಕೃಷಿ ಮತ್ತು ನೀರಾವರಿಗೆ ಹೆಚ್ಚಿನ ಅನುದಾನ ನಿಗದಿಪಡಿಸುವ ಮೂಲಕ ತಮ್ಮದು ರೈತಪರ ಸರ್ಕಾರ ಎಂಬುದನ್ನು ಬಜೆಟ್ ಮೂಲಕ ಬಿಂಬಿಸುವ ಆಶಯವನ್ನು ಹೊಂದಲಾಗಿದೆ. ತಮ್ಮ ಪಕ್ಷಕ್ಕೆ ಪೂರ್ಣ ಬಹುಮತ ದೊರಕಿದ್ದಲ್ಲಿ ಸರ್ಕಾರ ಅಸ್ತಿತ್ವಕ್ಕೆ ಬಂದ 24 ಗಂಟೆಗಳಲ್ಲೇ ರೈತರ ಸಂಪೂರ್ಣ ಸಾಲಮನ್ನಾ ಮಾಡುವುದಾಗಿ ಹೇಳಿಕೊಂಡು ಬಂದಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇದೀಗ ಸಾಲಮನ್ನಾ ಸಂಬಂಧ ಮಿತ್ರ ಪಕ್ಷ ಕಾಂಗ್ರೆಸ್ಸಿನ ನಾಯಕರನ್ನು ಮನವೊಲಿಸಲು ಹರಸಾಹಸವನ್ನೇ ಮಾಡಿದ್ದಾರೆ. ಅಂತಿಮವಾಗಿ ಅದರಲ್ಲಿ ಯಶಸ್ವಿಯೂ ಆಗಿದ್ದಾರೆ.
ಹಿಂದಿನ ಸರ್ಕಾರದ ಪ್ರಮುಖ ಯೋಜನೆಗಳನ್ನು ಕೈಬಿಡುವಂತಿಲ್ಲ ಎಂದು ಮಿತ್ರ ಪಕ್ಷ ಕಾಂಗ್ರೆಸ್ಸಿನ ಒತ್ತಾಸೆ ಇರುವುದರಿಂದ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿರುವಂತೆ ರೈತರ ಎಲ್ಲ ಸಾಲ ಮನ್ನಾ ಮಾಡುವುದು ಸಾಧ್ಯವಿಲ್ಲವಾದರೂ ರೈತ ಸಮುದಾಯಕ್ಕೆ ನಿರಾಸೆಯಾಗದಂತೆ ಮನ್ನಾ ಮಾಡಲಾಗುವುದು. ಸಾಲಮನ್ನಾಕ್ಕಾಗಿ ಜೆಡಿಎಸ್ ಪ್ರಣಾಳಿಕೆಯಲ್ಲಿ ನೀಡಿರುವ ಹಲವು ಪ್ರಮುಖ ಭರವಸೆಗಳನ್ನು ಕೈಬಿಡುವ ಸಾಧ್ಯತೆಯೂ ಇದೆ ಎಂಬ ಸುಳಿವನ್ನು ಮುಖ್ಯಮಂತ್ರಿಗಳ ಆಪ್ತರು ನೀಡಿದ್ದಾರೆ.
ಬಜೆಟ್‌ನ ಮುಖ್ಯ ಅಂಶಗಳು ಹೀಗಿವೆ…
- ಬಜೆಟ್ ನಿರೀಕ್ಷೆಗಳು
- ನೀರಾವರಿಗೆ 25 ಸಾವಿರ ಕೋಟಿ ರು. ಅನುದಾನ ನಿಗದಿ
- ನೀರಿನ ಸಮರ್ಪಕ ಬಳಕೆ ಸಂಬಂಧ ಇಸ್ರೇಲ್ ಮಾದರಿ ಕೃಷಿ ಪದ್ಧತಿ ಅಳವಡಿಕೆಗೆ ಪ್ರೋತ್ಸಾಹ
- ಗರ್ಭಿಣಿಯರು, ಬಾಣಂತಿಯರಿಗೆ ಆರು ತಿಂಗಳವರೆಗೆ ಆರು ಸಾವಿರ ರು. ಮಾಸಾಶನ
- 65 ವರ್ಷ ಮೇಲ್ಪಟ್ಟವಯೋವೃದ್ಧರಿಗೆ ಆರು ಸಾವಿರ ರು. ಮಾಸಾಶನ
- ಸರ್ವರಿಗೂ ಶಿಕ್ಷಣ, ಸರ್ವರಿಗೂ ಆರೋಗ್ಯ, ಸರ್ವರಿಗೂ ವಸತಿ ಭಾಗ್ಯ ಘೋಷಣೆ
- ಎಲ್ಲ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಿರ್ಭಯಾ ಕೇಂದ್ರ ಸ್ಥಾಪನೆ
- ನೆನೆಗುದಿಗೆ ಬಿದ್ದಿದ್ದ ಬೆಂಗಳೂರಿನ ಹೊರವಲಯದಲ್ಲಿ ಐದು ಪ್ರತ್ಯೇಕ ಟೌನ್‌ಶಿಪ್ ನಿರ್ಮಾಣಕ್ಕೆ ಚಾಲನೆ
- ಬರಗಾಲದಲ್ಲಿ ಮೇವು ಕೊರತೆ ನೀಗಿಸಲು ಮೇವು ಭದ್ರತೆ ನೀತಿ ಪ್ರಕಟ
- ಪ್ರತಿವರ್ಷ 20 ಲಕ್ಷ ಹೊಸ ಉದ್ಯೋಗ ಸೃಷ್ಟಿಗೆ ಆದ್ಯತೆ
- ಮನೆ ಬಾಗಿಲಿಗೆ ಉಚಿತ ಔಷಧ ವಿತರಿಸುವ ಹೊಸ ಯೋಜನೆ
- ಕೆಂಪೇಗೌಡ ಕೌಶಲ್ಯಾಭಿವೃದ್ಧಿ ವಿಶ್ವವಿದ್ಯಾಲಯ ಸ್ಥಾಪನೆ
Comments