ರಾಜ್ಯ ಸರ್ಕಾರಿ ಶಾಲೆಯ ಮಕ್ಕಳ ಶಿಕ್ಷಣ ಕುರಿತು ಗುಡ್ ನ್ಯೂಸ್ ಕೊಟ್ಟ ಎಚ್’ಡಿಕೆ
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮೈತ್ರಿ ಸರ್ಕಾರದ ಮೊದಲ ಬಜೆಟ್ ಮಂಡನೆ ಮಾಡಿದ್ದು, ಅದರಲ್ಲಿ ಸರ್ಕಾರಿ ಶಾಳೆಗಳ ವಿಲೀನ ಕುರಿತು ಕೆಲವು ನಿರ್ಧಾರಗಳನ್ನು ಘೊಷಿಸಿದ್ದಾರೆ.
1 ಕಿ.ಮೀ ವ್ಯಾಪ್ತಿಯಲ್ಲಿರುವ ಮತ್ತು ಕಡಿಮೆ ದಾಖಲಾತಿ ಇರುವ ಸರ್ಕಾರಿ ಮತ್ತು ಅನುದಾನಿತ ಶಾಲೆಗಳನ್ನು ಹತ್ತಿರದ ಶಾಲೆಯೊಂದಿಗೆ ವಿಲೀನಗೊಳಿಸಲಾಗುತ್ತದೆ. ಒಂದು ಕಿ.ಮೀ ವ್ಯಾಪ್ತಿಯಲ್ಲಿ ಕಡಿಮೆ ದಾಖಲಾತಿ ಇರುವ 28,847 ಸರ್ಕಾರಿ ಮತ್ತು ಅನುದಾನಿತ ಶಾಲೆಗಳನ್ನು ಗುರುತಿಸಿದ್ದು, ಹತ್ತಿರದ 8530 ಸರ್ಕಾರಿ ಶಾಲೆಗಳೊಂದಿಗೆ ವಿಲೀನಗೊಳಿಸಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತದೆ. ಪ್ರಸ್ತುತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಅಂಗನವಾಡಿ ಕೇಂದ್ರಗಳನ್ನು ಆಯ್ದು 4100 ಸರ್ಕಾರಿ ಶಾಲೆಗಳ ಆವರಣದಲ್ಲಿ ಸ್ಥಳಾಂತರಿಸಿ ಬಾಲಸ್ನೇಹಿ ಕೇಂದ್ರಗಳನ್ನಾಗಿ ಮಾಡಲಾಗುತ್ತದೆ. ಹಂತ ಹಂತವಾಗಿ ಬೇರೆ ಸರ್ಕಾರಿ ಶಾಲೆಗಳಲ್ಲಿ ಕೂಡ ಎಲ್ ಕೆಜಿ, ಯುಕೆಜಿಯನ್ನು ಆರಂಭಿಸಲಾಗುತ್ತದೆ.
Comments