ಬಿಜೆಪಿ ನಾಯಕರ ಆರೋಪಕ್ಕೆ ತಿರುಗೇಟು ಕೊಟ್ಟ ಎಚ್.ಡಿ.ರೇವಣ್ಣ; ಬಸ್ ಪಾಸ್ ಬಗ್ಗೆ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್..!!
ಸಾಲಮನ್ನಾ ಕೆಲವರಿಗೆ ಮಾತ್ರ ಸೀಮಿತವಾಗಿದೆ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರು ಖಡಕ್ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಇಂಧನ ಸಚಿವ ಎಚ್.ಡಿ.ರೇವಣ್ಣ ಅವರು, ಇನ್ನೂ ಎರಡು ಮೂರು ದಿನ ಕಾಯಿರಿ, ಯಾವ ಜಿಲ್ಲೆಗೆ ಎಷ್ಟು ಅನುಕೂಲವಾಗಿದೆ ಎಂಬುದನ್ನು ಹೇಳುತ್ತೇನೆ. ಇನ್ನು ರೈತರ ಸಾಲಮನ್ನಾಕ್ಕೆ ಕೇಂದ್ರದ ಅನುದಾನ ಕೊಟ್ಟಿಲ್ಲ. ಇದಕ್ಕೆ ರಾಜ್ಯದ ಬಿಜೆಪಿ ನಾಯಕರೇ ಕಾರಣ ಎಂದು ಆರೋಪಿಸಿದರು. ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸಮಸ್ಯೆಯನ್ನು ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಸರಿಪಡಿಸಲಿದ್ದಾರೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.
Comments