Breaking News : ಬಿಜೆಪಿ ನಾಯಕರ ವಿರುದ್ಧ ಬಿಗ್ ಸೀಕ್ರೆಟ್ ರಿವೀಲ್ ಮಾಡಿದ ಸಚಿವ ಎಚ್.ಡಿ.ರೇವಣ್ಣ
ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಅವರು ರಾಜ್ಯ ಬಿಜೆಪಿ ನಾಯಕರ ಬಗ್ಗೆ ಹೊಸ ಬಾಂಬ್ ಸಿಡಿಸಿದ್ದಾರೆ. ಪ್ರಧಾನಿ ಮೋದಿ ಅವರು ರಾಜ್ಯದ ರೈತರ ಸಂಪೂರ್ಣ ಸಾಲ ಮನ್ನಾ ಮಾಡಲು ಬೇಕಾದ ಹಣವನ್ನು ನೀಡಲು ಒಪ್ಪಿದ್ದರು. ಆದರೆ ಬಿಜೆಪಿ ಮುಖಂಡರು ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಗೆ ಪ್ರಶಂಸೆ ಹೋಗುತ್ತದೆ ಎಂದು ಹೇಳಿ ಹಣ ಕೊಡಲು ಬಿಡಲಿಲ್ಲ ಎಂದು ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಡಿ. ರೇವಣ್ಣ, ಸಿಎಂ ಹೆಚ್.ಡಿಕೆ ಅವರು ಪ್ರಧಾನಿ ಅವರನ್ನು ಭೇಟಿ ಮಾಡಿ ರೈತರ ಸಾಲ ಮನ್ನಾ ಮಾಡುವ ಬಗ್ಗೆ ಅಗತ್ಯ ನೆರವು ನೀಡುವಂತೆ ಕೇಳಿಕೊಂಡಿದ್ದರು. ಇದಕ್ಕೆ ಪ್ರಧಾನಿ ಮೋದಿ ಅವರೂ ಒಪ್ಪಿದ್ದರು. ಆದರೆ ರಾಜ್ಯದ ಬಿಜೆಪಿ ಮುಖಂಡರು ಇದನ್ನು ತಪ್ಪಿಸಿದ್ದಾರೆ ಎಂದು ಹೇಳಿದರು. ರಾಜ್ಯದ ರೈತರ ಸಂಪೂರ್ಣ ಸಾಲ ಮನ್ನಾ ಮಾಡಲು ಅಡ್ಡಗಾಲು ಹಾಕಿದ ಬಿಜೆಪಿಯವರಿಗೆ, ಬಜೆಟ್ ನಲ್ಲಿ ರೈತರ ಸಾಲ ಮನ್ನಾದಲ್ಲಿ ಅನ್ಯಾಯವಾಗಿದೆ ಎಂದು ಬೊಬ್ಬೆ ಹಾಕುತ್ತಾರೆ. ಅವರಿಗೆ ರೈತರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಕಿಡಿಕಾರಿದರು.
Comments