ಬಜೆಟ್ ಕುರಿತು ಸಿಎಂ ಎಚ್’ಡಿಕೆ ಪರ ಬಿಜೆಪಿ ಸದಸ್ಯ ಲೆಹರ್ ಸಿಂಗ್ ಬ್ಯಾಟಿಂಗ್
ವಿಧಾನ ಪರಿಷತ್ನಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪರವಾಗಿ ಬಿಜೆಪಿ ಸದಸ್ಯ ಲೆಹರ್ ಸಿಂಗ್ ಬ್ಯಾಟಿಂಗ್ ಮಾಡಿದ್ದಾರೆ. ಇದಕ್ಕೂ, ಮುನ್ನ "ನನ್ನ ಮಾತಿನಿಂದ ನಮ್ಮ ಬಿಜೆಪಿ ಸ್ನೇಹಿತರಿಗೆ ಬೇಸರ ಆಗಬಹುದು. ಆದರೂ, ಕುಮಾರಸ್ವಾಮಿ ಅವರ ಬಗ್ಗೆ ಕೆಲವು ಪಾಸಿಟಿವ್ ವಿಚಾರ ಹೇಳುತ್ತೇನೆ" ಎಂದು ಮಾತು ಪ್ರಾರಂಭಿಸಿದರು.
ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಆರ್ಥಿಕ ಶಿಸ್ತು ಕಾಪಾಡಿಕೊಂಡು ಬಜೆಟ್ ಮಂಡಿಸಿದ್ದಾರೆ. ಅಲ್ಲದೆ, ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಜಾರಿ ಮಾಡುವ ಬಗ್ಗೆ ಮುಖ್ಯಮಂತ್ರಿಗಳು ಯೋಜನೆ ರೂಪಿಸಿದ್ದಾರೆ. ಇದು ಸ್ವಾಗತಾರ್ಹ ವಿಚಾರ ಎಂದು ಹೇಳಿದ್ದಾರೆ. ಇಂಗ್ಲಿಷ್ ಬೋಧನೆಯಿಂದ ಕಾನ್ವೆಂಟ್ ವಿದ್ಯಾರ್ಥಿಗಳಿಗೆ ನಮ್ಮ ಬಡಮಕ್ಕಳೂ ಸ್ಪರ್ಧೆ ನೀಡಬಹುದು. ಕುಮಾರಸ್ವಾಮಿ ಅವರ ನಿರ್ಧಾರ ಉತ್ತಮವಾಗಿದೆ ಎಂದು ಹೇಳಿದರು.
Comments