ರಾಜ್ಯ ಸರ್ಕಾರದಿಂದ ಬಿಪಿಎಲ್ ಕಾರ್ಡ್ ದಾರರಿಗೆ ಮತ್ತೊಂದು ಗುಡ್ ನ್ಯೂಸ್..!!
ಜೆಡಿಎಸ್- ಕಾಂಗ್ರೆಸ್ ಮೈತ್ರಿಕೂಟ ಸರ್ಕಾರದ ಚೊಚ್ಚಲ ಬಜೆಟ್ ನಲ್ಲಿ ಬಿಪಿಎಲ್ ಕಾರ್ಡ್ ದಾರರಿಗೆ ಶಾಕಿಂಗ್ ನ್ಯೂಸ್ ಕೊಟ್ಟಿತ್ತು, ಆದ್ರೆ ಇದೀಗ ಬಿಪಿಎಲ್ ಪಡಿತರ ಚೀಟಿದಾರರ ಕುಟುಂಬಗಳ ಸದಸ್ಯರಿಗೆ ತಲಾ ಮಾಸಿಕ 7 ಕೆಜಿ ಅಕ್ಕಿ ವಿತರಣೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ ಎಂದು ಖಚಿತವಾಗಿದೆ.
ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಬಜೆಟ್ ನಲ್ಲಿ ತಲಾ 7 ಕೆ.ಜಿ ಅಕ್ಕಿಯನ್ನು 5 ಕೆ.ಜಿ ಗೆ ಇಳಿಕೆ ಮಾಡುವ ತೀರ್ಮಾನವನ್ನು ಪ್ರಕಟಿಸಿದ್ದರು. ಮಿತ್ರಪಕ್ಷ ಕಾಂಗ್ರೆಸ್ ಒತ್ತಡ ಹಾಗೂ ಸಾರ್ವಜನಿಕ ವಲಯದ ಆಗ್ರಹಕ್ಕೆ ಮಣಿದು ಬಿಪಿಎಲ್ ಕುಟುಂಬಗಳ ಪ್ರತಿ ಸದಸ್ಯರಿಗೆ ಮಾಸಿಕ 7 ಕೆಜಿ ಅಕ್ಕಿ ವಿತರಣೆ ಮುಂದುವರೆಸುವ ತೀರ್ಮಾನವನ್ನು ಬಜೆಟ್ ಅನುಮೋದನೆ ಹಂತದಲ್ಲಿ ಕೈಗೊಂಡರು. ಆದರೆ ಈ ಗೊಂದಲದಿಂದ ಬಿಪಿಎಲ್ ಕುಟುಂಬಗಳಿಗೆ ಪಡಿತರ ವಿತರಣೆಯಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ.
Comments