ಕುಮಾರಸ್ವಾಮಿಯವರು ಸಿಎಂ ಆದ ಬಳಿಕ ರಾಜ್ಯದಲ್ಲಿ ಉತ್ತಮ ಮಳೆ ಎಂದ ಜೆಡಿಎಸ್ ಶಾಸಕ



ರಾಜ್ಯದಲ್ಲಿ ಎಚ್.ಡಿ. ಕುಮಾರಸ್ವಾಮಿಯವರು ಸಿಎಂ ಆದ ಬಳಿಕವೇ ಮಳೆ, ಬೆಳೆ ಚೆನ್ನಾಗಿ ಆಗಲಾರಂಭಿಸಿದೆ ಎಂದು ಸಣ್ಣ ನೀರಾವರಿ ಸಚಿವ ಪುಟ್ಟರಾಜು ಹೇಳಿದ್ದಾರೆ.
ಕುಮಾರಸ್ವಾಮಿ ಸಿಎಂ ಆದ ಬೆನ್ನಲ್ಲೇ ರಾಜ್ಯದಲ್ಲಿ ಉತ್ತಮ ಮಳೆ ಬೀಳುತ್ತಿದೆ. ರಾಜ್ಯದ ಬಹುತೇಕ ಎಲ್ಲ ಅಣೆಕಟ್ಟುಗಳು ಭರ್ತಿಯಾಗಿವೆ ಎಂದ ಅವರು, ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ನದಿಗಳಿಗೆ ಬಾಗಿನ ಅರ್ಪಿಸಿ, ಪೂಜೆ ಸಲ್ಲಿಸಲಿದ್ದಾರೆ. ಜು.19 ರಂದು ಮಡಿಕೇರಿಗೆ, ಜು.20ಕ್ಕೆ ತಲಕಾವೇರಿಯಲ್ಲಿ ಬೆಳಗ್ಗೆ ಪೂಜೆ ನಡೆಸಲಿದ್ದಾರೆ. ಅದೇ ದಿನ ನಾಡದೇವತೆ ಚಾಮುಂಡೇಶ್ವರಿಗೆ ನಮಿಸಿ, ಕಬಿನಿ ಅಣೆಕಟ್ಟೆಗೆ ಬಾಗಿನ ಅರ್ಪಿಸಲಿದ್ದಾರೆ. ಮಧ್ಯಾಹ್ನ ಕೆಆರ್‌ಎಸ್ ಗೆ ಬಾಗಿನ ಅರ್ಪಿಸಲಿದ್ದಾರೆ ಎಂದರು. ಅದೇ ದಿನ ಮಂಡ್ಯದಲ್ಲಿ ಲೋಕಸಭೆ ಚುನಾವಣೆ ಸಂಬಂಧ ಬೃಹತ್ ಸಮಾವೇಶ ಏರ್ಪಡಿಸಲಾಗಿದ್ದು, ಕುಮಾರಸ್ವಾಮಿ ಅವರಿಗೆ ಅಭಿನಂದನೆ ಕಾರ್ಯಕ್ರವೂ ನಡೆಯಲಿದೆ. ನೂತನವಾಗಿ ನಿರ್ಮಿಸಲಾಗಿರುವ ಕೆ. ಶಂಕರೇಗೌಡ ಭವನವನ್ನೂ ಕುಮಾರಸ್ವಾಮಿ ಅಂದು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದ್ದಾರೆ.
Comments