ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್..!! 283 ಖಾಲಿ ಹುದ್ದೆ ಶೀಘ್ರ ಭರ್ತಿ..!
ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಖಾಲಿ ಇರುವ 849 ಹುದ್ದೆಗಳ ಪೈಕಿ 283 ಹುದ್ದೆಗಳನ್ನು ಕೆಪಿಎಸ್ಸಿ ಮೂಲಕ ಒಂದು ತಿಂಗಳಲ್ಲಿ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ್ ಪಾಟೀಲ್ ಹೇಳಿದ್ದಾರೆ.
ಚಿಕ್ಕಬಳ್ಳಾಪುರದ ಎಂ.ಸ್ಯಾಂಡ್ ಘಟಕಕ್ಕೆ ಭೇಟಿ ನೀಡಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸರ್ಕಾರದಿಂಧ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಈಗಾಗಳೇ ಮಂಜೂರಾದ 1,241 ಹುದ್ದೆಗಳಲ್ಲಿ ಈಗಾಗಲೇ 398 ಭರ್ತಿಯಾಗಿವೆ ಎಂದರು. ರಾಜ್ಯದಲ್ಲಿ ಗಣಿಗಾರಿಕೆಗೆ ಅನುಮತಿ ನೀಡುವಂತೆ ಪ್ರಸ್ತಾವನೆಗಳು ಬರುತ್ತಿವೆ. ಇದರ ನಡುವೆ ಗಣಿಗಾರಿಕೆ ಕುರಿತು ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಅಂತ ತಿಳಿಸಿದರು.
Comments