ಬಿಗ್ ಬ್ರೇಕಿಂಗ್ : ಇವರಿಗೆ ಫಿಕ್ಸ್ ಆಯ್ತು ಜೆಡಿಎಸ್ ನೂತನ ರಾಜ್ಯಾಧ್ಯಕ್ಷರ ಪಟ್ಟ..!!
ಪಕ್ಷದ ರಾಜ್ಯಾಧ್ಯಕ್ಷ ಜವಾಬ್ದಾರಿಯಿಂದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಕ್ತಗೊಳಿಸಿ ಸರ್ಕಾರದ ಹೊಣೆಗಾರಿಕೆಯನ್ನು ಸಮರ್ಥವಾಗಿ ನಿಭಾಯಿಸುವ ನಿಟ್ಟಿನಲ್ಲಿ ಬೆಂಬಲ ನೀಡಲು ಜೆಡಿಎಸ್ ಚಿಂತನೆ ನಡೆಸಿದೆ.
ಹೌದು..ಸಿಎಂ ಸ್ಥಾನ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ವನ್ನು ನಿಭಾಯಿಸುವುದಕ್ಕೆ ಸಾಧ್ಯವಾಗುತ್ತಿಲ್ಲ ಎನ್ನಲಾಗುತ್ತಿರುವ ಹಿನ್ನಲೆಯಲ್ಲಿ ಎಚ್.ಡಿ.ಕುಮಾರಸ್ವಾಮಿಯವರನ್ನು ಜೆಡಿಎಸ್ ರಾಜ್ಯಾಧ್ಯಕ್ಷ ದಿಂದ ವಿಮುಕ್ತಿಗೊಳಿಸಲಾಗುತ್ತಿದೆ ಎನ್ನಲಾಗಿದೆ.ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಚರ್ಚೆ ನಡೆಸಲಾಯಿತು. ಪೌರ ಸಂಸ್ಥೆಗಳು ಹಾಗೂ ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ ಚುರುಕುಗೊಳಿಸಲು ಹಂಗಾಮಿ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಲು ಜೆಡಿಎಸ್ ವರಿಷ್ಠರು ನಿರ್ಣಯಿಸಿದ್ದು, ಮಾಜಿ ಶಾಸಕ ಬಿ.ಬಿ. ನಿಂಗಯ್ಯ ಅವರಿಗೆ ಈ ಜವಾಬ್ದಾರಿ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ. ಲೋಕಸಭೆ ಚುನಾವಣೆಗೆ ಸೂಕ್ತ ಅಭ್ಯರ್ಥಿಗಳಹುಡುಕಾಟ ನಡೆಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಕಾಂಗ್ರೆಸ್ ಜತೆಗೆ ಕೈ ಜೋಡಿಸಿದರೆ ಯಾವ ಕ್ಷೇತ್ರದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂಬುದರ ಚಿಂತನೆ ನಡೆಸುವಂತೆ ಸೂಚಿಸಲಾಗಿದೆ. ಎಷ್ಟು ಸ್ಥಾನ ಬಿಟ್ಟುಕೊಡಬೇಕು ಎಂಬುದು ಕಾಂಗ್ರೆಸ್ ಜತೆಗೆ ಇನ್ನೂ ಚರ್ಚೆಯಾಗದ ಕಾರಣ ರಾಜ್ಯದ 28 ಕ್ಷೇತ್ರಗಳಲ್ಲಿ ಸ್ಪರ್ಧಿಸುವ ನಿಟ್ಟಿನಲ್ಲಿ ಪಕ್ಷವನ್ನು ಸಂಘಟಿಸುವಂತೆ ತಿಳಿಸಲಾಗಿದೆ. ಈ ಬಗ್ಗೆ ಮುಂದಿನ ತಿಂಗಳುರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
Comments