ರಾಮನಗರ ಹಾಗೂ ಚನ್ನಪಟ್ಟಣ ಕ್ಷೇತ್ರಕ್ಕೆ ಬಂಪರ್ ಕೊಡುಗೆ ಕೊಟ್ಟ ಕುಮಾರಣ್ಣ...!!

ರಾಮನಗರ ಮತ್ತು ಚನ್ನಪಟ್ಟಣ ಎರಡು ಕ್ಷೇತ್ರಗಳು ನನಗೆ ಎರಡು ಕಣ್ಣು. ಈ ಎರಡು ಕ್ಷೇತ್ರದ ಅಭಿವೃದ್ಧಿಗೆ ಈ ವರ್ಷ ಎರಡು ಸಾವಿರ ಕೋಟಿ ಖರ್ಚು ಮಾಡುತ್ತೇನೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಚನ್ನಪಟ್ಟಣದಲ್ಲಿ ನಗರೋತ್ಥಾನ ಯೋಜನೆಯ ಮೂವತ್ತು ಕೋಟಿ ಮೌಲ್ಯದ ಕಾಮಗಾರಿಗಳಿಗೆ ತಮ್ಮ ಪತ್ನಿ ಅನಿತಾ ಅವರೊಂದಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ಚನ್ನಪಟ್ಟಣ ಕ್ಷೇತ್ರದ ಜನತೆ ಋಣ ನನ್ನ ಮೇಲೆ ಇದೆ. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ನನ್ನ ಗುರಿ ಎಂದರು. ರಾಮನಗರ ಮತ್ತು ಚನ್ನಪಟ್ಟಣವನ್ನು ಅವಳಿ ನಗರವನ್ನಾಗಿ ಘೋಷಣೆ ಮಾಡಿ, ದಿನದ ಇಪ್ಪತ್ನಾಲ್ಕು ಗಂಟೆ ಕುಡಿಯುವ ನೀರು ಒದಗಿಸಲಾಗುವುದು. ರಾಮನಗರ - ಚನ್ನಪಟ್ಟಣ ಹೆದ್ದಾರಿ ಮಧ್ಯ ಐನೂರು ಎಕರೆ ಪ್ರದೇಶದಲ್ಲಿ ರೇಷ್ಮೆ ಸೂಪರ್ ಮಾರುಕಟ್ಟೆ ನಿರ್ಮಾಣ ಮಾಡಿ, ರೈತರಿಗೆ ಅನುಕೊಲ ಕಲ್ಪಿಸುತ್ತೇನೆ ಎಂದು ತಿಳಿಸಿದರು. ಹಾಲು ಉತ್ಪಾದಕರಿಗೆ ಸಹಾಯ ಮಾಡುವ ಉದ್ದೇಶದಿಂದ ರಾಜ್ಯದಲ್ಲಿ ನೂತನವಾಗಿ ಐದು ಮೆಗಾ ಡೇರಿ ಸ್ಥಾಪನೆ ಮಾಡಲಾಗುವುದು. ಈ ಸಂಬಂಧ ಕೇಂದ್ರ ಸಚಿವರೊಂದಿಗೆ ಮಾತುಕತೆ ಆಗಿದೆ ಎಂದರು.
Comments