ಖಾಸಗಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಟ್ಟ ಡಿಸಿಎಂ ಡಾ.ಜಿ.ಪರಮೇಶ್ವರ್..!!

ಖಾಸಗಿ ಶಾಲೆಯ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ನೀಡುವ ಕುರಿತು ಸಮಾಲೋಚನೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದರು.
ಛಲವಾದಿ ಕಾರ್ಯಕ್ರಮವಾದ ಹಿನ್ನಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಅಭಿನಂದನ ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಿಗೆ ಮಾತ್ರ ಉಚಿತ ಬಸ್ ಪಾಸ್ ವ್ಯವಸ್ಥೆ ಮಾಡಲಾಗಿದೆ. ಇದೊಂದು ಆರಂಭ ಮಾತ್ರ. ಇದರ ಸಾಧಕ-ಬಾದಕ ಪರಿಶೀಲಿಸಿ, ಆರ್ಥಿಕ ಪರಿಸ್ಥಿತಿ ನೋಡಿಕೊಂಡು ನಿರ್ಧಾರ ತೆಗೆದುಕೊಳ್ಳಲಾಗುವುದು' ಎಂದರು. ಆಗಸ್ಟ್ ಮೊದಲವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಚುನಾವಣೋತ್ತರ ವಿಮರ್ಶೆ ಅವರ ಸಮ್ಮುಖದಲ್ಲಿ ನಡೆಯಲಿದೆ ಎಂದರು.
Comments