ಬಿಗ್ ಬ್ರೇಕಿಂಗ್ : ರಾಮನಗರ ಉಪಚುನಾವಣೆಗೆ ಜೆಡಿಎಸ್‌ನಿಂದ ಅಖಾಡಕ್ಕಿಳಿಯಲಿರುವ ಈ ಪ್ರಭಾವಿ ನಾಯಕ..!!



ರಾಮನಗರ ಉಪಚುನಾವಣೆಗೆ ಜೆಡಿಎಸ್‌ನಿಂದ ನಟ ಅಂಬರೀಶ್ ಕಣಕ್ಕಿಳಿದರೆ ಅವರ ವಿರುದ್ಧ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಾನೇ ಸ್ಪರ್ಧಿಸುತ್ತೇನೆ. ಈ ವಿಷಯದಲ್ಲಿ ನಮ್ಮ ಪಕ್ಷದ ವರಿಷ್ಠರು ಅನುಮತಿ ನೀಡದಿದ್ದರೂ ನಾಮಪತ್ರ ಸಲ್ಲಿಸಲು ಸಿದ್ಧ ಎಂದು ವಿಧಾನಪರಿಷತ್ ಸದಸ್ಯ ಎಂ.ಲಿಂಗಪ್ಪ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಆಗಿರುವ ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಭಾಗಿದಾರರಲ್ಲ. ಈಗಿರುವ ಹೊಂದಾಣಿಕೆ ವ್ಯವಸ್ಥೆ ನಮ್ಮ ಆತ್ಮಕ್ಕೆ ಒಪ್ಪಿಗೆ ಆಗುತ್ತಿಲ್ಲ. ರಾಮನಗರ ಕ್ಷೇತ್ರ ಉಪ ಚುನಾವಣೆಯಲ್ಲಿ ಜೆಡಿಎಸ್ -ಕಾಂಗ್ರೆಸ್ ಮೈತ್ರಿ ಇರುವುದಿಲ್ಲ. ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಇಕ್ಬಾಲ್ ಹುಸೇನ್ ಅವರನ್ನು ಉಪ ಚುನಾವಣೆಯಲ್ಲಿ ಕಣಕ್ಕಿಳಿಸಲಾಗುವುದು. ಕಾಂಗ್ರೆಸ್ ಅಭ್ಯರ್ಥಿಯಾಗಲು ಮೊದಲ ಆಯ್ಕೆ ಮತ್ತು ಅವಕಾಶ ಅವರಿಗೆ ಮೀಸಲು. ಅವರು ಒಪ್ಪದಿದ್ದರೆ ಪಕ್ಷದಲ್ಲಿ ಚರ್ಚಿಸಿ ಬೇರೊಬ್ಬರಿಗೆ ಅವಕಾಶ ನೀಡಲಾಗುವುದು ಎಂದರು.
Comments