ಬಿಗ್ ಬ್ರೇಕಿಂಗ್ : ಲೋಕಸಭಾ ಚುನಾವಣೆ ಹಿನ್ನಲೆ ರಾಜಕೀಯ ವಲಯದಲ್ಲಿ ಅಚ್ಚರಿ ಬೆಳವಣಿಗೆ..! 'ಕೈ' ಪಾಳಯಕ್ಕೆ ಬಿಗ್ ಶಾಕ್..!!

ಲೋಕಸಭಾ ಸ್ಥಾನವು ಸಿ.ಎಸ್. ಪುಟ್ಟರಾಜು ಅವರ ರಾಜೀನಾಮೆಯಿಂದ ತೆರವಾಗಿರುವ ಮಂಡ್ಯ ಲೋಕಸಭೆ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಅವರನ್ನು ಕಣಕ್ಕಿಳಿಸಬೇಕು ಎಂದು ಎಚ್.ಡಿ. ದೇವೇಗೌಡ ಅವರಿಗೆ ಮಂಡ್ಯದ ಜೆಡಿಎಸ್ ನಾಯಕರುಗಳು ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಈ ಮೊದಲು ಲೋಕಸಭೆ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಪ್ರಜ್ವಲ್ ಅವರನ್ನು ಕಣಕ್ಕಿಳಿಸುವ ಇಂಗಿತವನ್ನು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರು ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದರು. ಇದಲ್ಲದೇ ಲೋಕಸಬಾ ಚುನಾವಣೆಯಲ್ಲೂ ಕೂಡ ದೇವೇಗೌಡ್ರು ಸ್ಪರ್ಧೆ ಮಾಡದೇ ಇರುವುದರ ಬಗ್ಗೆ ಸುದ್ದಿಯೊಂದು ಹರಿದಾಡುತಿತ್ತು. ಈ ನಡುವೆ ಬದಲಾದ ರಾಜಕೀಯ ಸನ್ನಿವೇಶದಲ್ಲಿ ದೇವೇಗೌಡ್ರು ಮತ್ತೆ ಹಾಸನ ಲೋಕಸಭಾ ಕ್ಷೇತ್ರದಿದ ಸ್ಪರ್ಧೆ ಮಾಡಲು ನಿರ್ಧಾರಮಾಡಿದ್ದು, ತಮ್ಮ ಮೊಮ್ಮಗ ಪ್ರಜ್ವಲ್ ರೇವಣ್ಣನವರಿಗೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಮಾಡಲು ಅವಕಾಶ ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ.
Comments