ವಿದ್ಯುತ್ ಕುರಿತು ಬೆಂಗಳೂರು ಜನತೆಗೆ ಗುಡ್ ನ್ಯೂಸ್ ಕೊಟ್ಟ ಸಿಎಂ ಎಚ್’ಡಿಕೆ

ಬೆಂಗಳೂರಿನಲ್ಲಿ ವಿದ್ಯುತ್ ಪೂರೈಕೆಗೆ ಮೂಲ ಸೌಕರ್ಯಗಳನ್ನು ಸುಧಾರಿಸಲು ಉನ್ನತ ಅಧಿಕಾರಿಗಳ ಸಭೆ ಕರೆಯಲು ಸಿಎಂ ಎಚ್.ಡಿ.ಕುಮಾರಸ್ವಾಮಿ ಸೂಚಿಸಿದ್ದಾರೆ.
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು, ಬೆಂಗಳೂರಿನಲ್ಲಿ ಯಾವುದೇ ಕಾರಣಕ್ಕೂ ವಿದ್ಯುತ್ ಪೂರೈಕೆ ಗೆ ತೊಂದರೆ ಆಗಬಾರದು. ವಿದ್ಯುತ್ ಸೋರಿಕೆ ಆಗದಂತೆ ಕ್ರಮ ವಹಿಸಬೇಕು ಎಂದು ಸೂಚಿಸಿದರು. ಸಾರ್ವಜನಿಕರಿಗೆ ತೊoದರೆಯಾಗದಂತೆ ಲೈನ್ ಗಳನ್ನು ಹಾಕಬೇಕು, ಬೆಂಗಳೂರು ನಗರದಲ್ಲಿ 3000MW ದಾಖಲಾದ ವಿದ್ಯುತ್ ಬೇಡಿಕೆ ಇದೆ. ನಗರದಲ್ಲಿ ವಿದ್ಯುತ್ ಪೂರೈಕೆ ಸಮರ್ಪಕವಾಗಿ ನಿರ್ವಹಿಸಲು ಭೂಗತ ಕೇಬಲ್ ಅಳವಡಿಸಲಾಗುತ್ತಿದೆ. ಈ ಬಗ್ಗೆ ಇರುವ ತೊಡಕುಗಳನ್ನು ಪರಿಹರಿಸಲು, ಲೋಕೋಪಯೋಗಿ ಇಲಾಖೆ, ಬೆಂಗಳೂರು ನಗರ ಜಿಲ್ಲಾಧಿಕಾರಿ, ಬಿಬಿಎಂಪಿ ಹಾಗೂ ಪೊಲೀಸ್ ಆಯುಕ್ತರನ್ನು ಒಳಗೊಂಡ ಸಭೆ ಕರೆಯಲು ಸೂಚಿಸಿದ್ದಾರೆ. ಮರಗಳನ್ನು ಕಡಿಯುವುದನ್ನು ನಿಯಂತ್ರಿಸಲು ಸೂಚನೆ ನೀಡಿದ್ದಾರೆ.
Comments