Breaking News : ನೂತನ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಹೆಚ್. ವಿಶ್ವನಾಥ್ ಆಯ್ಕೆ..!?
ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಸಚಿವ, ಹುಣಸೂರಿನ ಶಾಸಕ ಹೆಚ್. ವಿಶ್ವನಾಥ್ ಆಯ್ಕೆಯಾಗಿದ್ದಾರೆ. ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡರು ಜೆಡಿಎಸ್ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಹೆಚ್.ವಿಶ್ವನಾಥ ರವನರನು ಆಯ್ಕೆ ಮಾಡಿದ್ದಾರೆ ಎನ್ನಲಾಗಿದೆ.
ದೇವೇಗೌಡರು ಖುದ್ದು ವಿಶ್ವನಾಥ್ ರವರಿಗೆ ದೂರವಾಣಿ ಕರೆ ಮಾಡಿ ಈ ವಿಷಯ ತಿಳಿಸಿದ್ದು, ವಿಶ್ವನಾಥ್ ಅವರು ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ರಾಜ್ಯಾಧ್ಯಕ್ಷರಾಗಿರುವ ಕುಮಾರಸ್ವಾಮಿಯವರು ಈಗ ಮುಖ್ಯಮಂತ್ರಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಜೆಡಿಎಸ್ ಜವಾಬ್ದಾರಿಯನ್ನು ಹೆಚ್. ವಿಶ್ವನಾಥ್ ಅವರಿಗೆ ನೀಡಲು ದೇವೇಗೌಡರು ಮುಂದಾಗಿದ್ದಾರೆ.
Comments