ರಾಜ್ಯದ ಎಲ್ಲಾ ಪದವಿ ಕಾಲೇಜುಗಳಲ್ಲಿ ಈ ಕೋರ್ಸ್ ಕಡ್ಡಾಯ : ಉನ್ನತ ಶಿಕ್ಷಣ ಸಚಿವ ಜಿಟಿಡಿ ಘೋಷಣೆ
ರಾಜ್ಯ ಸರ್ಕಾರವು ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ಯೋಗವನ್ನು ಕಡ್ಡಾಯ ಮಾಡಲು ನಿರ್ಧರಿಸಿದ್ದು, ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿ, ರಿಜಿಸ್ಟ್ರಾರ್ ಗಳ ಸಭೆ ಬಳಿಕ ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಈ ವಿಷಯ ಪ್ರಕಟಿಸಿದ್ದಾರೆ.
ಇನ್ನು ಉನ್ನತ ಶಿಕ್ಷಣದ ಗುಣಮಟ್ಟ ಸುಧಾರಣೆಗಾಗಿ ಅಧ್ಯಾಪಕರ ಭರ್ತಿ ಜೊತೆಗೆ, ಮೂಲಸೌಕರ್ಯ ಸುಧಾರಣೆಗೂ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರತಿ ಕಾಲೇಜು ಈ ಸಂಬಂಧ ಮುಂದಿನ 15 ದಿನಗಳೊಳಗೆ ಬೇಡಿಕೆ ಪಟ್ಟಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.
Comments