ಬೆಂಗಳೂರಿನ ಕೆರೆಗಳ ರಕ್ಷಣೆ ಬಗ್ಗೆ ಹಿರಿಯ ಸ್ವಾತಂತ್ರ್ಯ ಹೋರಾಟಗಾರದ ಹೆಚ್.ಎಸ್.ದೊರೆಸ್ವಾಮಿ ಅವರ ಜತೆ ಸಿಎಂ ಎಚ್’ಡಿಕೆ ಮಹತ್ವದ ಚರ್ಚೆ..!!

ಬೆಂಗಳೂರಿನ ಕೆರೆಗಳನ್ನು ರಕ್ಷಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಹಾಗೂ ಅವುಗಳ ರಕ್ಷಣೆಗೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಹಿರಿಯ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಅಧ್ಯಕ್ಷ ಹೆಚ್.ಎಸ್.ದೊರೆಸ್ವಾಮಿ ಅವರೊಂದಿಗೆ ಇಂದು ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಮಾತುಕತೆ ನಡೆಸಿದರು.
ಸರ್ಕಾರವು ಭೂಮಿ-ವಸತಿ ಯೋಜನೆಗಳ ಅನುಷ್ಠಾನದ ಮೇಲುಸ್ತುವಾರಿಗಾಗಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದ್ದು, ಅದು ಫೆಬ್ರವರಿಯಲ್ಲಿ ಕಾರ್ಯಾರಂಭ ಮಾಡಿತ್ತು. ಆದರೆ ಚುನಾವಣೆಗಳು ಬಂದ ಕಾರಣ ಕೆಲಸ ಮುಂದುವರೆದಿಲ್ಲ. ಅದು ತ್ವರಿತವಾಗಿ ಪುನ: ಕಾರ್ಯಾರಂಭ ಮಾಡಿ ಬೆಂಗಳೂರಿನ ಕೆರೆಗಳನ್ನು ರಕ್ಷಿಸುವುದೂ ಸೇರಿದಂತೆ ಹಲವು ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕೆಂದು ಹೆಚ್.ಎಸ್.ದೊರೆಸ್ವಾಮಿ ಅವರು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು. ಈಗಾಗಲೇ ಬಿಬಿಎಂಪಿ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಹಲವು ಸುತ್ತಿನ ಸಭೆಗಳನ್ನು ನಡೆಸಲಾಗಿದ್ದು, ಬೆಂಗಳೂರಿನ ಕೆರೆಗಳನ್ನು ರಕ್ಷಿಸಲು ಮನವಿ ಮಾಡಿದ್ದಾರೆ. ಕೆರೆಗಳು ನಮ್ಮ ಜೀವನಾಡಿ. ಅವುಗಳನ್ನು ರಕ್ಷಿಸುವುದು ನಮ್ಮ ಆದ್ಯ ಕರ್ತವ್ಯ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.
Comments