ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಚಾರಕ್ಕೆ ಜೆಡಿಎಸ್ ಮಾಸ್ಟರ್ ಪ್ಲಾನ್....!!

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಚಾರಕ್ಕೆ ಜೆಡಿಎಸ್ ನ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರ ನೇತೃತ್ವದಲ್ಲಿ ಎರಡು ಪ್ರತ್ಯೇಕ ತಂಡಗಳನ್ನು ರಚಿಸುವ ಸಾಧ್ಯತೆಗಳಿವೆ.
ಈಗಾಗಲೇ ಚುನಾವಣಾ ವೇಳಾಪಟ್ಟಿಪ್ರಕಟವಾಗಿರುವ ಕಾರಣ ರಾಜ್ಯದಂಥ ಪ್ರವಾಸ ಕೈಗೊಂಡು ಚುನಾವಣಾ ಪ್ರಚಾರವನ್ನು ನಡೆಸಲಾಗುತ್ತದೆ. .ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ ಮಾಡುವುದರಿಂದ ಸ್ಥಳೀಯವಾಗಿ ಸ್ನೇಹಮಯಿ ಹೋರಾಟವನ್ನು ಮಾಡಲು ನಿರ್ಧರಿಸಲಾಗಿದೆ.
ಯಾವ ತಂಡ ಯಾವ ಯಾವ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಬೇಕು ಎಂಬುದನ್ನು ಸದಸ್ಯದಲ್ಲೇ ನಿರ್ಧರಿಸಲಿದ್ದಾರೆ ಚುನಾವಣಾ ಪ್ರಚಾರಕ್ಕೆ ಹೆಲಿಕಾಪ್ಟರ್ ಬಳಸುವ ಬಗ್ಗೆಯೂ ಚಿಂತನೆ ನಡೆಸಲಗಿದ್ದೂ ಆಯಾ ವಿಧಾನಸಭಾ ಕ್ಷೇತ್ರಗಳ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಚುನಾವಣಾ ಜವಾಬ್ದಾರಿಯನ್ನು ನೀಡಲು ನಿರ್ಧರಿಸಲಾಗಿದ್ದು, ಸದ್ಯದಲ್ಲೇ ಜಿಲ್ಲಾ ಉಸ್ತುವಾರಿ ಸಚಿವರಿಗೆ ಎರಡುಮೂರು ಜಿಲ್ಲೆಗಳ ಚುನಾವಣಾ ಹೊಣೆಗಾರಿಕೆಯನ್ನು ನೀಡಲಾಗುವುದು. ಕಾಂಗ್ರೆಸ್ ಮತ್ತು ಬಿಜೆಪಿ ವಿರುದ್ದವೇ ಜೆಡಿಎಸ್ ನ ಅಭ್ಯರ್ಥಿಗಳು ತೀವ್ರ ಪೈಪೋಟಿ ನಡೆಸಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಬೇಕಾಗಿದೆ. ಆಯಾ ಜಿಲ್ಲಾಧ್ಯಕ್ಷರು ಹಾಗೂ ಸ್ಥಳೀಯ ಮುಖಂಡರು ಸಮಾಲೋಚನೆ ನಡೆಸಿ ಪ್ರಬಲ ಪೈಪೋಟಿ ನೀಡುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ರಾಜ್ಯ ಸಮಿತಿಯ ಒಪ್ಪಿಗೆ ಪಡೆಯಬೇಕೆಂದು ಸೂಚಿಸಲಾಗಿದೆ.
Comments