ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಪ್ರಜ್ವಲ್ ರೇವಣ್ಣಗೆ ಕ್ಷೇತ್ರ ಪಿಕ್ಸ್..!

13 Aug 2018 9:07 AM |
11777 Report

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ನಾನು ಈ ಬಾರಿ ಲೋಕಸಭೆ ಚುನಾವಣೆಗೆ ನಿಲ್ಲಲು ಇನ್ನೂ ನಿರ್ಣಯವನ್ನೇ ಮಾಡಿಲ್ಲ, ಹಾಗಾಗಿ ಈ ಬಾರಿ ಹಾಸನ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಅವರನ್ನು ಚುನಾವಣೆಗೆ ನಿಲ್ಲಿಸಲು ಆಸಕ್ತಿ ಹೊಂದಿದ್ದೇನೆ. ಪ್ರಜ್ವಲ್ ಯುವಕನಿದ್ದಾನೆ, ವಿದ್ಯಾವಂತ, ಆತನನ್ನು ಇಲ್ಲಿ ನಿಲ್ಲಿಸಬೇಕೆಂಬುದೇ ನನ್ನ ಅಭಿಪ್ರಾಯ, ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದಿದ್ದಾರೆ.

ಇನ್ನೂ ಪ್ರಧಾನಿ ಅಭ್ಯರ್ಥಿಯ ಬಗ್ಗೆ ಮಾತನಾಡಿದ ಗೌಡರು ವಿರೋಧ ಪಕ್ಷಗಳ ಮೈತ್ರಿ ಕೂಟದ ಪ್ರಧಾನಿ ಅಭ್ಯರ್ಥಿ ವಿಚಾರದಲ್ಲಿ  ನಾವಂತೂ ರಾಹುಲ್ ಗಾಂಧಿ ಅವರನ್ನೇ ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಂಬಿಸುತ್ತೇವೆ. ಸಾರ್ವಜನಿಕವಾಗಿಯೇ ಈ ಮಾತನ್ನು ನಾನು ಹೇಳಿದ್ದೇನೆ ಎಂದರು.

Edited By

hdk fans

Reported By

hdk fans

Comments