ರಾಷ್ಟ್ರ ರಾಜಕಾರಣಕ್ಕೆ ಎಚ್.ಡಿ ಕುಮಾರಸ್ವಾಮಿ..!?ಈಗಂತ ಭವಿಷ್ಯ ನುಡಿದಿದ್ದು ಯಾರು ಗೊತ್ತಾ..?

ವಿಧಾನ ಸಭಾ ಚುನಾವಣೆಯ ಫಲಿತಾಂಶದಿಂದ ಮೈತ್ರಿ ಸರ್ಕಾರದಿಂದ ಮುಖ್ಯಮಂತ್ರಿಯಾದ ಕುಮಾರಸ್ವಾಮಿ ಅವರು ಇದೀಗ ರಾಷ್ಟ್ರ ರಾಜಕಾರಣಕ್ಕೆ ಕಾಲಿಡಲಿದ್ದಾರೆ ಎಂದು ಹೇಳಲಾಗುತ್ತಿದೆ.
ನಾನು ಮುಂದೆ ಪ್ರಧಾನಿ ಅಭ್ಯರ್ಥಿಯೂ ಆಗುವುದಿಲ್ಲ, ಹಾಗೆಯೇ ಲೋಕಸಭಾ ಚುನಾವಣೆಗೂ ಕೂಡ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ತಿಳಿಸಿದ್ದಾರೆ. ಇನ್ನು ಇದೇ ಸಂದರ್ಭದಲ್ಲಿ ವಿಪಕ್ಷಗಳಾದ ಬಿಜೆಪಿಯವರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿಯೇ ಟಾರ್ಗೆಟ್ ಆಗಿಬಿಟ್ಟಿದ್ದಾರೆ. ಅವರನ್ನು ಅಧಿಕಾರದಿಂದ ಕೆಳಗಿಸುವ ಎಲ್ಲಾ ರೀತಿಯ ಪ್ರಯತ್ನವನ್ನು ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಮುಂಬರುವ ದಿನಗಳಲ್ಲಿ ಹೆಚ್.ಡಿ.ಕುಮಾರಸ್ವಾಮಿ ರಾಷ್ಟ್ರ ರಾಜಕಾರಣಕ್ಕೆ ಹೋಗುವ ಎಲ್ಲಾ ಸಾಧ್ಯತೆಗಳಿದ್ದು, ಅವರು ರಾಷ್ಟ್ರ ರಾಜಕಾರಣಕ್ಕೆ ಕಾಲಿಡಲಿದ್ದಾರೆ ಎಂದು ಭವಿಷ್ಯವನ್ನು ಕೂಡ ನುಡಿದಿದ್ದಾರೆ.
Comments