ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಹಿನ್ನಲೆ ಅಧಿಕಾರಿಗಳಿಗೆ ಖಡಕ್ ಸೂಚನೆ ಕೊಟ್ಟ ಸಿಎಂ ಎಚ್'ಡಿಕೆ

ಕೆಲವು ದಿನಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕೊಡಗು, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಉಡುಪಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಿ ಎಂದು ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ. ಮಳೆಯಿಂದಾಗಿ ಸಂಭವಿಸಬಹುದಾದ ಪ್ರವಾಹ, ಭೂ ಕುಸಿತ ಮತ್ತಿತರ ಅನಾಹುತಗಳ ಕುರಿತು ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಪರಿಹಾರ ಒದಗಿಸಲು ಸನ್ನದ್ಧವಾಗಿರುವಂತೆ ಹೇಳಿದ್ದಾರೆ. ಜಿಲ್ಲಾ ಉಸ್ತುವರಿ ಸಚಿವರು ಕೂಡ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು ಮತ್ತು ಪರಿಹಾರ ಒದಗಿಸಲು ಸನ್ನದ್ದರಾಗಿರುವಂತೆ ಸೂಚಿಸಿದ್ದಾರೆ.
Comments