ಭಾರತ ರತ್ನ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ [94] ಇನ್ನಿಲ್ಲ.....

50 ವರ್ಷಗಳ ಕಾಲ ಸ್ವಚ್ಛ ರಾಜಕೀಯ ಬದುಕು ಕಂಡ ಕವಿ ಹೃದಯದ ಚಿಂತಕ, ಮಾನವತಾವಾದಿ, ಇಂದು ಸಂಜೆ 5 ಘಂಟೆ 5 ನಿಮಿಷಕ್ಕೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಇಹ ಲೋಕ ತ್ಯಜಿಸಿದ್ದಾರೆ, ಅಟಲ್ ರವರು, 1924 ರ ಡಿಸೆಂಬರ್ 25 ರಂದು ಕೃಷ್ಣದೇವಿ ಹಾಗೂ ಕೃಷ್ಣ ಬಿಹಾರಿ ವಾಜಪೇಯಿ ಅವರಿಗೆ ಮಗನಾಗಿ ಮಧ್ಯ ಪ್ರದೇಶದ ಗ್ವಾಲಿಯರ್ ಹತ್ತಿರದ ಶಿಂದೆ ಕಿ ಚವ್ವಾಣಿ ಎನ್ನುವ ಗ್ರಾಮದಲ್ಲಿ ಜನಿಸಿದ್ದರು. ಭಾರತದ ರಾಜಕೀಯದಲ್ಲಿ ಬಹುಕಾಲದಿಂದ ಸಕ್ರಿಯರಾಜಕಾರಣಿಯಾಗಿ ತಮ್ಮ ಅಪೂರ್ವ ಯೋಗದಾನವನ್ನು ನೀಡಿದ್ದಾರೆ. ಅವರೊಬ್ಬ ಕವಿ, ಹೆಸರಾಂತ ಪತ್ರಕರ್ತ, ಶ್ರೇಷ್ಠ ವಾಗ್ಮಿ, ಚಿಂತಕ, ದಾರ್ಶನಿಕ, ನಿಸ್ವಾರ್ಥ ರಾಜಕಾರಣಿ ಎಂದು ಭಾರತ, ಹಾಗೂ ವಿಶ್ವದಲ್ಲಿ ಹೆಸರುವಾಸಿಯಾಗಿದ್ದರು. ಮೋದಿಗೆ ರಾಜಧರ್ಮ ಪರಿಪಾಲನೆ ಪಾಠ ಮಾಡಿದ್ದ ವಾಜಪೇಯಿ, ದೇಶದ ಪ್ರಧಾನಿಯಾಗಿ ಎರಡು ಬಾರಿ ಕಾರ್ಯ ನಿರ್ವಹಿಸಿದ ಮೊದಲ ಅವಿವಾಹಿತ ಎನಿಸಿಕೊಂಡಿದ್ದರು, 2005 ರಿಂದ ಸಕ್ರಿಯ ರಾಜಕೀಯದಿಂದ ದೂರ ಉಳಿದಿದ್ದ ವಾಜಪೇಯಿ ಅವರನ್ನು ಬಿಜೆಪಿಯ ವಿರೋಧಿಸುವ ಮುಖಂಡರು ಕೂಡಾ ಗೌರವದಿಂದ ಕಾಣುತ್ತಿದ್ದರು,
ಪ್ರೋಖ್ರಾನ್ ಅಣು ಪರೀಕ್ಷೆ, ಪಾಕಿಸ್ತಾನದೊಂದಿಗೆ ಬಾಂಧವ್ಯ ಬೆಸೆಯುವ ಸಾರಿಗೆ ವ್ಯವಸ್ಥೆ, ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ, ಸುವರ್ಣ ಚತುಷ್ಪಥ ಯೋಜನೆ, ಸರ್ವ ಶಿಕ್ಷಾ ಅಭಿಯಾನ ಮುಂತಾದವು ವಾಜಪೇಯಿ ಕಾಲದಲ್ಲಿ ಆದಂತ ಯೋಜನೆಗಳು.
ಅವರ 90ನೇ ಹುಟ್ಟುಹಬ್ಬಕ್ಕೆ ಮುನ್ನಾ ದಿನ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಭಾರತ ರತ್ನ ಪ್ರಶಸ್ತಿಯನ್ನು ಘೋಷಿಸಿತ್ತು. ಮಾಜಿ ಪ್ರಧಾನಿ ವಾಜಪೇಯಿ ನಿಧನಕ್ಕೆ ಕೇಂದ್ರ ರೇಷ್ಮೆ ಮಂಡಲಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ, ಬೆಂ.ಗ್ರಾ.ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಹೆಚ್.ಎಸ್. ಶಿವಶಂಕರ್, ಉಪಾಧ್ಯಕ್ಷ ಶಿವು, ಬೆಂ.ಗಾ.ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಎಂ.ಕೆ.ವತ್ಸಲ, ನಗರ ಬಿಜೆಪಿ ಅಧ್ಯಕ್ಷ ರಂಗರಾಜು, ಪ್ರಧಾನ ಕಾರ್ಯದರ್ಶಿ ಬಿ.ಜಿ ಶ್ರೀನಿವಾಸ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಪ್ರಮೀಳ ಮಹದೇವ್, ತಮ್ಮ ಸಂತಾಪವನ್ನು ಸೂಚಿಸಿದ್ದಾರೆ,
Comments