ಪ್ರವಾಹ ಪೀಡಿತ ಜಿಲ್ಲೆಗಳಿಗೆ ಸಿಎಂ ಎಚ್’ಡಿಕೆ ಕೊಟ್ಟ ಭರ್ಜರಿ ಅನುದಾನ

ಕೊಡಗು ಸೇರಿದಂತೆ ಅತಿವೃಷ್ಟಿ ಬಾಧಿತ ಆರು ಜಿಲ್ಲೆಗಳಿಗೆ ಪರಿಹಾರ ಕಾರ್ಯಗಳಿಗಾಗಿ 200 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಆದೇಶಿಸಿದ್ದಾರೆ.
ಭಾರೀ ಮಳೆಯಿಂದಾಗಿ ಪ್ರವಾಹ, ಭೂಕುಸಿತ ಮತ್ತಿತರ ಅನಾಹುತ ಸಂಭವಿಸಿರುವ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಹಾಸನ, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವಸ್ತುಸ್ಥಿತಿ ಕುರಿತಂತೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ಸಭೆ ನಡೆಯಿತು. ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಮಳೆ ಹಾಗೂ ನೆರೆ ಹಾವಳಿಯಿಂದ ಆರು ಜಿಲ್ಲೆಗಳಲ್ಲಿ ವ್ಯಾಪಕ ಹಾನಿ ಸಂಭವಿಸಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಪರಿಹಾರ ಕಾರ್ಯಗಳಿಗಾಗಿ 200 ಕೋಟಿ ರೂ.ಅನುದಾನ ಕೂಡಲೇ ಬಿಡುಗಡೆ ಮಾಡಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
Comments