ದೆಹಲಿಯಲ್ಲಿ ಯಡಿಯೂರಪ್ಪನ ಕುತಂತ್ರದ ಬಗ್ಗೆ ಎಚ್ ಡಿ ಕುಮಾರಸ್ವಾಮಿ ಹೇಳಿದ್ದು ಹೀಗೆ..!
ದೆಹಲಿಗೆ ತೆರಳಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ದೆಹಲಿಯಲ್ಲಿ ಏನೇನು ಮಾಡುತ್ತಾರೆ ಎಂದು ನನಗೆ ಚೆನ್ನಾಗಿ ಗೊತ್ತು ಎಂದು ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಹೇಳಿದ್ದಾರೆ. ಕೊಡಗಿನ ಪ್ರವಾಹ ಮತ್ತು ಪರಿಹಾರದ ಬಗ್ಗೆ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿದ ಬಳಿಕ ಮಾತನಾಡಿದ ಅವರು, ಯಡಿಯೂರಪ್ಪ ದೆಹಲಿಯಲ್ಲಿ ನಡೆಸುತ್ತಿರುವ ಕರಾಮತ್ತು ಏನೇನು ಎಂಬುದು ನನಗೆ ಗೊತ್ತು. ಸಮಯ ಬಂದಾಗ ಈ ಬಗ್ಗೆ ಹೇಳುತ್ತೇನೆ ಎಂದರು.
ರಾಜ್ಯದಲ್ಲಿ ಜಾರಿಯಲ್ಲಿರುವ ಸಾಲಮನ್ನಾ ಸೇರಿದಂತೆ ಯಾವ್ಯಾವ ಯೋಜನೆಗೆ ಅಡ್ಡಿ ಮಾಡುತ್ತಿದ್ದಾರೆ ಎಲ್ಲಾ ಗೊತ್ತು, ಆದರೆ ಇದಕ್ಕೆಲ್ಲ ನಾವು ಹೆದರುವುದಿಲ್ಲ. ರಾಜ್ಯದಲ್ಲಿ ಮೈತ್ರಿ ಸರ್ಕಾರ ಭದ್ರವಾಗಿದೆ. ಏನೇ ಕುತಂತ್ರ ನಡೆಸಿದರೂ ಸರ್ಕಾರ ಉರುಳಿಸಲು ಸಾಧ್ಯವಿಲ್ಲ ಎಂದು ಹೇಳಿದರು.
Comments