ಮಾಜಿ ಸಿಎಂ ಸಿದ್ದುಗೆ ಬಿಗ್ ಶಾಕ್ ಕೊಡಲು ಮುಂದಾದ ಸಮನ್ವಯ ಸಮಿತಿಯಿಂದ ...!
ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಬ್ಬರ ನಡುವೆ ಮುಸುಕಿನ ಗುದ್ದಾಟ ನಡೆದು ಕೊಂಡು ಬಂದಿದೆ.ಈ ನಡುವೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸಮನ್ವಯ ಸಮಿತಿ ಪುನಾರಚನೆ ಮಾಡಲು ತೆರೆಮರೆಯಲ್ಲಿ ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಈ ನಡುವೆ ಸಮನ್ವಯ ಸಮಿತಿಯಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊರಹಾಕಲು ದೊಡ್ಡಮಟ್ಟದಲ್ಲಿ ಮಾಸ್ಟರ್ ಪ್ಲಾನ್ ವೊಂದು ಸಿದ್ದವಾಗಿದೆ ಎನ್ನಲಾಗುತ್ತಿದೆ. ಸಿದ್ದರಾಮಯ್ಯ ಅವರು ಯೂರೋಪ್ ಪ್ರವಾಸಕ್ಕೆ ತೆರಳಿದ ಸಂದರ್ಭದಲ್ಲಿ ಸಮನ್ವಯ ಸಮಿತಿಯ ಪುನಾರಚನೆಗೆ ಸಿದ್ಧತೆ ನಡೆದಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
Comments