ಎಚ್ ಡಿ ಕುಮಾರಸ್ವಾಮಿ 4 ತಿಂಗಳ ಸರ್ಕಾರ ಬದಲಾವಣೆಯ ಬಗ್ಗೆ ಹೇಳಿದ್ದು ಹೀಗೆ..!
ಇನ್ನು ನಾಲ್ಕು ತಿಂಗಳಲ್ಲಿ ಸರ್ಕಾರವು ಏನಾಗಲಿದೆ ಎಂಬುದು ನನಗೆ ಗೊತ್ತಿದೆ. ಕೆಲವರು ನನ್ನನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸಲು ಕಾಯ್ದು ಕುಳಿತಿದ್ದಾರೆ. ಈ ಸರ್ಕಾರವನ್ನು ಯಾರೂ ಏನೂ ಮಾಡಲು ಸಾಧ್ಯವಿಲ್ಲ. ಯಾವ ಕಾರಣಕ್ಕೂ ಕುರ್ಚಿಗಾಗಿ ಅಂಟಿಕೊಂಡವನಲ್ಲ, ಇನ್ನು ನಾಲ್ಕು ತಿಂಗಳಲ್ಲಿ ಯಾವ ರೀತಿ ಬದಲಾವಣೆ ಯಾಗುತದ್ದೆ ಎಂದು ಕಾದುನೋಡಿ ಸಮ್ಮಿಶ್ರ ಸರ್ಕಾರ ಯಾವುದೇ ಕಾರಣಕ್ಕೂ ಬೀಳುವುದಿಲ್ಲ. ಸಮ್ಮಿಶ್ರ ಸರ್ಕಾರವನ್ನು ಹೇಗೆ ನಡೆಸಬೇಕು ಎಂಬುದು ನನಗೆ ತಿಳಿದಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಮ್ಮ ವಿರೋಧಿಗಳಿಗೆ ಖಡಕ್ ಆಗಿ ತಿರುಗೇಟು ನೀಡಿದ್ದಾರೆ.
ಮುಖ್ಯಮಂತ್ರಿ ಖುರ್ಚಿ ಭದ್ರತೆಗಾಗಿ ನಾನು ಸಮಯ ವ್ಯರ್ಥ ಮಾಡುವುದಿಲ್ಲ. ಸರ್ಕಾರದ ಶಕ್ತಿ ಏನೆಂಬುದು ನನಗೆ ತಿಳಿದಿದೆ. ಮುಂದೆಯೂ ಈ ಸರ್ಕಾರ ಭದ್ರವಾಗಿರುತ್ತದೆ. ಈ ಹಿಂದೆ ನಾನು ಆಕಸ್ಮಿಕವಾಗಿ ಮುಖ್ಯಮಂತ್ರಿಯಾಗಿದ್ದೆ. ಇಂದು ಕೂಡ ದೇವರ ದಯೆಯಿಂದ ಆಕಸ್ಮಿಕವಾಗಿ ಮುಖ್ಯಮಂತ್ರಿಯಾಗಿದ್ದೇನೆ. ನಾನು ಎಷ್ಟುದಿವಸ ಈ ಹುದ್ದೆಯಲ್ಲಿ ಇರುತ್ತೇನೆ ಎಂಬುವುದನ್ನು ಆ ದೇವರೇ ಬರೆದಿದ್ದಾನೆ. ನಾನು ಶಾಸಕರ ಜತೆಗೆ ಹೇಗೆ ನಡೆದುಕೊಳ್ಳುತ್ತಿದ್ದೇನೆ. ಎಂತಹ ಬಾಂಧವ್ಯ ಹೊಂದಿದ್ದೇನೆ. ಎಷ್ಟುಸೂಕ್ಷ್ಮತೆಯಿಂದ ಕೆಲಸ ಮಾಡುತ್ತಿದ್ದೇನೆ ಎಂಬುದನ್ನು ಸರ್ಕಾರ ಅಸ್ಥಿರಗೊಳಿಸಲು ಯತ್ನಿಸುತ್ತಿರುವವರು ಅರ್ಥ ಮಾಡಿಕೊಳ್ಳಬೇಕು' ಎಷ್ಟುದಿವಸ ಮುಖ್ಯಮಂತ್ರಿಯಾಗಿ ಇರುತ್ತೇನೆ ಎಂಬುದು ಮುಖ್ಯವಲ್ಲ. ಇರುವಷ್ಟುದಿನ ಹೇಗೆ ನಾಡಿನ ಜನರ ಸೇವೆ ಮಾಡುತ್ತೇನೆ ಎಂಬುದು ಮುಖ್ಯ' ಎಂದು ಕುಮಾರಸ್ವಾಮಿ ನುಡಿದರು.
ಇನ್ನು ಕೆಲ ಮಾಧ್ಯಮಗಳ ವಿರುದ್ಧ ಹರಿಹಾಯ್ದ ಕುಮಾರಸ್ವಾಮಿ ಮಾಧ್ಯಮಗಳು ಹಳದಿ ಕಣ್ಣಿನಲ್ಲಿ ನೋಡುವುದನ್ನು ಬಿಟ್ಟು ಸರ್ಕಾರದ ಉತ್ತಮ ಕೆಲಸಗಳನ್ನು ಪ್ರೋತ್ಸಾಹಿಸಬೇಕು. ಇದರಿಂದ ಮತ್ತಷ್ಟುಕೆಲಸ ಮಾಡಲು ನನಗೆ ಹುಮ್ಮಸು ಬರುತ್ತದೆ' ಎಂದರು.
Comments