ಯಡಿಯೂರಪ್ಪ ತಂತ್ರದ ಸಾಕ್ಷಿಗಳು ಸಿಕ್ಕಿದೆ: ಎಚ್ ಡಿ ಕೆ
ಮೈತ್ರಿ ಸರ್ಕಾರವನ್ನು ಬೀಳಿಸಲು ಕೇಂದ್ರದ ತನಿಖಾ ಸಂಸ್ಥೆಗಳನ್ನು ರಾಜ್ಯ ಬಿಜೆಪಿ ಬಳಸಿಕೊಳ್ಳುತ್ತಿದೆ ಎಂದು ಸಿಎಂ ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೆ ಇದಕ್ಕೆ ಸಾಕ್ಷಿಗಳನ್ನೂ ನೀಡಿದ್ದಾರೆ.
ಇಂಗ್ಲಿಷ್ ಪತ್ರಿಕೆಯೊಂದರ ಜೊತೆ ಮಾತನಾಡಿದ್ದ ಕುಮಾರಸ್ವಾಮಿ, ಸರ್ಕಾರವನ್ನು ಬೀಳಿಸಲು ಬಿಜೆಪಿ ಮಾಡುತ್ತಿರುವ ಯತ್ನಗಳ ಬಗ್ಗೆ ವಿವರವಾಗಿ ಹೇಳಿಕೊಂಡಿದ್ದಾರೆ. ಯಡಿಯೂರಪ್ಪ ಅವರ ಪುತ್ರ ಬಿ.ವೈ.ರಾಘವೇಂದ್ರ ಅವರು ದಕ್ಷಿಣ ಭಾರತ ಆದಾಯ ತೆರಿಗೆ ಇಲಾಖೆ ಮುಖ್ಯಸ್ಥ ಬಿ.ಆರ್.ಬಾಲಕೃಷ್ಣನ್ ಅವರನ್ನು ಇತ್ತೀಚೆಗಷ್ಟೆ ಭೇಟಿ ಆಗಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಯಡಿಯೂರಪ್ಪನವರು ಆದಾಯ ತೆರಿಗೆ ಇಲಾಖೆಯ ಮುಖ್ಯಸ್ಥರನ್ನು ಭೇಟಿ ಮಾಡಿರುವ ಬಗ್ಗೆ ಒಪ್ಪಿಕೊಂಡಿದರೆ.
Comments