ಸಾಮೂಹಿಕ ವಿನಾಯಕ ವಿಸರ್ಜನೆ ಕಾರ್ಯಕ್ರಮ

ವಿಶ್ವ ಹಿಂದೂ ಪರಿಷತ್, ಬಜರಂಗದಳ ವತಿಯಿಂದ ದೊಡ್ಡಬಳ್ಳಾಪುರ ನಗರದ ವಿವಿಧ ಕಡೆಗಳಲ್ಲಿ ಕೂರಿಸುವ ಗಣೇಶನ ಮೂರ್ತಿಯ ವಿಸರ್ಜನಾ ಕಾರ್ಯಕ್ರಮವನ್ನು ಸಾಮೂಹಿಕವಾಗಿ ನಡೆಸಲು ತೀರ್ಮಾನಿಸಲಾಗಿದೆ, ದಿನಾಂಕ 15-9-018 ರ ಶನಿವಾರ ಸಂಜೆ ಐದು ಘಂಟೆಯ ಒಳಗೆ ಊರಿನ ಎಲ್ಲಾ ಭಾಗಗಳಲ್ಲಿ ಇಟ್ಟಿರುವ ಗಣೇಶ ಮೂರ್ತಿಗಳನ್ನು ಶ್ರೀ ನೆಲದ ಆಂಜನೇಯಸ್ವಾಮಿ ದೇವಸ್ಥಾನದ ಆವರಣಕ್ಕೆ ಕರೆತಂದು ನಂತರ ಅದ್ದೂರಿ ಮೆರವಣಿಗೆ ಮುಖಾಂತರ ಹೊರಟು ಕಾಶಿ ವಿಶ್ವೇಶ್ವರ ದೇವಸ್ಥಾನದ ಬಳಿ ಇರುವ ಕಲ್ಯಾಣಿಯಲ್ಲಿ ವಿಸರ್ಜನಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ಗಣೇಶ ಮೂರ್ತಿಯನ್ನು ಕೂರಿಸುವ ಊರಿನ ಎಲ್ಲಾ ಸಂಘ ಸಂಸ್ಥೆಗಳು ಸಹಕರಿಸಲು ವಿಶ್ವ ಹಿಂದೂ ಪರಿಷತ್, ಬಜರಂಗದಳ ಪದಾಧಿಕಾರಿಗಳು ಕೋರಿದ್ದಾರೆ.
Comments