ಬಡವರಿಗಾಗಿ ಎಚ್ ಡಿ ಕೆ ಕೇಂದ್ರದಿಂದ ಕೇಳಿದ್ದೇನು..?
ರಾಜ್ಯದಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಉಚಿತ ಎಲ್.ಪಿ.ಜಿ. ಪಡೆಯಲು ಆಯ್ಕೆಯಾಗದ ಬಡವರಿಗೆ ಉಚಿತ ಎಲ್.ಪಿ.ಜಿ ಸಂಪರ್ಕ ನೀಡಲು ರೂಪಿಸಲಗಿರುವ ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಕೇಳಿದ್ದು ಹೀಗೆ.
ಕರ್ನಾಟವನ್ನು ಸೀಮೆ ಎಣ್ಣೆ ಮುಕ್ತ ಮಾಡುವ ಗುರಿ ಸಾಧಿಸಲು ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಯಡಿ ತಿಂಗಳಿಗೆ ಕನಿಷ್ಠ 1 ರಿಂದ 2 ಲಕ್ಷ ಸಂಪರ್ಕಗಳನ್ನು ಒದಗಿಸುವ ಅಗತ್ಯವಿದ್ದು, ಅದಕ್ಕಾಗಿ ಸರ್ಕಾರದಿಂದ ಭದ್ರತಾ ಠೇವಣಿಯನ್ನು ವಿತರಕರಿಗೆ ಪಾವತಿಸಲು ಅವಕಾಶ ನೀಡಬೇಕಾಗಿದೆ. ಈ ನಿಟ್ಟಿನಲ್ಲಿ ತೈಲ ಕಂಪೆನಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಮುಖ್ಯಮಂತ್ರಿಗಳು ಕೇಂದ್ರ ಸಚಿವರನ್ನು ಮನವಿ ಮಾಡಿದ್ದೂ ಇದಕ್ಕೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು, ಈ ವಿಷಯವನ್ನು ಕೂಲಂಕಷವಾಗಿ ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
Comments