ಬಿಗ್ ಬ್ರೇಕಿಂಗ್ : ಬಿ.ಎಸ್.ವೈ ಗೆ ಸಿಎಂ ಎಚ್'ಡಿಕೆ ತಿರುಗೇಟು..!ಬಿ.ಎಸ್.ವೈ ನ ಕೆಲವು ಪ್ರಕರಣಗಳ ದಾಖಲೆ ಬಿಡುಗಡೆ..!
ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ನಡುವೆ ವಾಕ್ಸಮರ ನಡೆದಿದ್ದು, ಬಿ.ಎಸ್.ಯಡಿಯೂರಪ್ಪನವರು ಇಂದು ಸಂಜೆ ಕುಮಾರಸ್ವಾಮಿ ಕುಟುಂಬದ ಭೂ ಹಗರಣಗಳ ಕುರಿತಾದ ದಾಖಲೆ ಬಿಡುಗಡೆ ಮಾಡಲಿದ್ದಾರೆಂದು ಹೇಳಲಾಗಿದೆ.
ಯಡಿಯೂರಪ್ಪನವರು ತಮ್ಮ ಕುಟುಂಬದ ಕುರಿತು ಆಡಿರುವ ಕೆಲ ಮಾತುಗಳಿಂದ ಆಕ್ರೋಶಗೊಂಡಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರು, ಇಂದು ಬೆಳಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುವ ವೇಳೆ, ತಾವು ರಾಜ್ಯದ ಮುಖ್ಯಮಂತ್ರಿಯಾಗಿದ್ದು ನಮಗೂ ರಾಜಕೀಯ ಮಾಡಲು ಬರುತ್ತದೆ ಎಂದು ಪರೋಕ್ಷ ಎಚ್ಚರಿಕೆ ನೀಡಿದ್ದರು. ಇದೀಗ ದಾಖಲೆ ಬಿಡುಗಡೆ ಮಾಡಲು ಮುಂದಾಗಿರುವ ಯಡಿಯೂರಪ್ಪನವರಿಗೆ ತಿರುಗೇಟು ನೀಡಲು ಮುಖ್ಯಮಂತ್ರಿ ಕುಮಾರಸ್ವಾಮಿಯವರು, ಅವರ ವಿರುದ್ಧ ಈ ಹಿಂದೆ ದಾಖಲಾಗಿದ್ದ ಕೆಲ ಪ್ರಕರಣಗಳಿಗೆ ಮರುಜೀವ ನೀಡಲು ಮುಂದಾಗಿದ್ದಾರೆಂದು ಹೇಳಲಾಗಿದೆ. ಈ ಹಿನ್ನಲೆಯಲ್ಲಿ ಯಡಿಯೂರಪ್ಪನವರ ಕಾಲಾವಧಿಯ ಡಿನೋಟಿಫಿಕೇಶನ್ ಸೇರಿದಂತೆ ಕೆಲ ಹಗರಣಗಳ ಮಾಹಿತಿಯನ್ನು ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸಂಗ್ರಹಿಸುತ್ತಿದ್ದಾರೆಂದು ಹೇಳಲಾಗುತ್ತಿದೆ.
Comments