ರಾಜ್ಯ ಸರ್ಕಾರದಿಂದ ರೈತರ ಈ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ..!ಯಾರ್ಯಾರಿಗೆ ಗೊತ್ತಾ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್..

20 Sep 2018 5:34 PM |
4539 Report

ಪ್ರಸಕ್ತ ವರ್ಷದ ಆಗಸ್ಟ್‌ ಅಂತ್ಯಕ್ಕೆ ಆತ್ಮಹತ್ಯೆ ಮಾಡಿಕೊಂಡ 114 ರೈತರ ಕುಟುಂಬಗಳಿಗೆ ತಲಾ ಐದು ಲಕ್ಷ ರೂ. ಪರಿಹಾರ ನೀಡಲಾಗಿದೆ. ರಾಜ್ಯದಲ್ಲಿ 2742 ಕಂದಾಯ ಗ್ರಾಮಗಳನ್ನು ರಚಿಸಬೇಕಾಗಿದ್ದು, 1413 ಕಂದಾಯ ಗ್ರಾಮಗಳ ರಚನೆಗೆ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದೆ.

724 ಕಂದಾಯ ಗ್ರಾಮಗಳ ರಚನೆಗೆ ಅಧಿಸೂಚನೆ ಹೊರಡಿಸಲಾಗಿದೆ. ಇದಲ್ಲದೇ ಸೆ.17ರಂದು ಭೂ ಪರಿವರ್ತನೆಯನ್ನು ಆನ್‌ಲೈನ್‌ನಲ್ಲಿ ಮಾಡಿಕೊಳ್ಳುವ ಸಂಬಂಧ ಸುತ್ತೋಲೆ ಹೊರಡಿಸಲಾಗಿದೆ ಎಂದು ಕಂದಾಯ ಸಚಿವ ದೇಶಪಾಂಡೆ ತಿಳಿಸಿದರು. ಸರಳೀಕರಣ ಪ್ರಕ್ರಿಯೆಯಲ್ಲಿ ಯಾವುದೇ ಲೋಪದೋಷ ಆಗದಂತೆ ಎಚ್ಚರಿಕೆ ವಹಿಸುವಂತೆ ಸಿಎಂ ಎಚ್. ಡಿ.ಕುಮಾರಸ್ವಾಮಿ ಸೂಚಿಸಿದರು. ಕರ್ನಾಟಕ ಭೂ ಕಂದಾಯ ಕಾಯ್ದೆಯ 1964ರ ಕಲಂ 94 (ಸಿ) ಅಡಿಯಲ್ಲಿ 26,922 ಅರ್ಜಿಗಳನ್ನು ಹಾಗೂ 94(ಸಿಸಿ) ಅಡಿಯಲ್ಲಿ 13971 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಸಾಮಾಜಿಕ ಮತ್ತು ಭದ್ರತೆ ಪಿಂಚಣಿ ವಿತರಣೆಯಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಅಂಚೆ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ ಸಮಸ್ಯೆ ಬಗೆಹರಿಸಿರುವುದಾಗಿ ಅಧಿಕಾರಿಗಳು ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ವಿವಿಧ ಐದು ಸೇವೆಗಳನ್ನು ಆನ್‌ಲೈನ್‌ನಲ್ಲಿ ಒದಗಿಸಲು ಸಿದ್ಧತೆ ನಡೆದಿದ್ದು, ಈ ಬಗ್ಗೆ ಕಾನೂನು ಸಲಹೆ ಪಡೆಯಲು ತೀರ್ಮಾನಿಸಲಾಯಿತು.

Edited By

Shruthi G

Reported By

hdk fans

Comments