ಸಿಎಂ ಜನತಾ ದರ್ಶನದಲ್ಲಿ ಬದಲಾವಣೆ...ಇಲ್ಲಿದೆ ನೀವು ತಿಳಿಯಬೇಕಾದ ಮುಖ್ಯ ಅಂಶ..!

ವೈದ್ಯರ ಸಲಹೆ ಮೇರೆಗೆ ನಾಡಿನ ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲಿಯೇ ಬಗೆಹರಿಸುವ ನಿಟ್ಟಿನಲ್ಲಿ ನಡೆಯುತ್ತಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಜನತಾದರ್ಶನವು ಇನ್ನು ಮುಂದೆ ವಾರಕ್ಕೊಮ್ಮೆ ನಡೆಯುವ ಬದಲು ತಿಂಗಳಿಗೊಮ್ಮೆ ನಡೆಯಲಿದೆ.
ಸಿಎಂ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗುತ್ತಿರುವುದರಿಂದ ವೈದ್ಯರ ಸಲಹೆ ಮೇರೆಗೆ ತಿಂಗಳಿಗೊಮ್ಮೆ ನಡೆಸಲು ನಿರ್ಧರಿಸಲಾಗಿದೆ. ಒಂದು ತಿಂಗಳು ಬೆಂಗಳೂರಲ್ಲಿ ಮತ್ತು ಒಂದು ತಿಂಗಳು ಜಿಲ್ಲಾ ಕೇಂದ್ರದಲ್ಲಿ ಜನತಾದರ್ಶನ ನಡೆಸಲು ತೀರ್ಮಾನಿಸಲಾಗಿದೆ. ದಿನಾಂಕ ಮತ್ತು ಸ್ಥಳವನ್ನು ಮುಂಚಿತವಾಗಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ. ಸೆ.1ರಿಂದ ಅಧಿಕೃತವಾಗಿ ಜನತಾದರ್ಶನಕ್ಕೆ ಚಾಲನೆ ನೀಡಲಾಗಿತ್ತು. ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ತಮ್ಮ ಅಹವಾಲನ್ನು ತೋಡಿಕೊಂಡಿದ್ದರು. ಜನರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸುವ ಪ್ರಯತ್ನ ಮಾಡಲಾಗಿದ್ದು, ನೂರಾರು ಜನರಿಗೆ ಪರಿಹಾರ ಲಭ್ಯವಾಗಿದೆ. ಮುಖ್ಯಮಂತ್ರಿಯಾಗುವ ಮುನ್ನ ಕುಮಾರಸ್ವಾಮಿ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಬಳಿಕ ವೈದ್ಯರು ವಿಶ್ರಾಂತಿ ತೆಗೆದುಕೊಳ್ಳುವಂತೆ ಸಲಹೆ ನೀಡಿದ್ದರು.
Comments