ರಾಜ್ಯ ಸರ್ಕಾರದಿಂದ ದಸರಾ ಹಬ್ಬಕ್ಕೆ ಈ ಜಿಲ್ಲೆಗೆ ಬಂಪರ್ ಕೊಡುಗೆ ಘೋಷಿಸಿದ ಸಿಎಂ ಎಚ್'ಡಿಕೆ..!
ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಹಾಸನ ಜಿಲ್ಲೆಗೆ ಬಂಪರ್ ಕೊಡುಗೆ ನೀಡಿದ್ದು, ಜಿಲ್ಲೆಯಲ್ಲಿ 20 ಸಾವಿರ ಕೋಟಿ ರೂ. ಬಂಡಾವಲ ಹೂಡುವ ನೂತನ ಉದ್ಯಮವನ್ನು ದಸರಾ ವೇಳೆಗೆ ಪ್ರಾರಂಭ ಮಾಡಲಾಗುವುದು ಎಂದು ಹೇಳಿದ್ದಾರೆ.
ಚನ್ನರಾಯಪಟ್ಟಣ ಅಮಾನಿಕರೆಯಿಂದ ತೋಟಿ ಸೇರಿದಂತೆ 28 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರು, ಹೊಸ ಉದ್ಯಮದಿಂದ 10 ಸಾವಿರ ಮಂದಿಗೆ ಉದ್ಯೋಗವಕಾಶ ದೊರೆಯಲಿದೆ ಎಂದರು. ರೈತರ ಸಾಲದ ವಿವರಗಳನ್ನು ನೀಡುವಂತೆ ಎಲ್ಲ ರಾಷ್ಟ್ರೀಕೃತ ಬ್ಯಾಂಕ್ ಗಳಿಗೆ ಸುತ್ತೋಲೆ ಕಳುಹಿಸಲಾಗಿದೆ. ಅದು ಬಂದ ನಂತರ ಆ ಸಾಲವನ್ನೂ ಮನ್ನಾ ಮಾಡುವ ಪ್ರಕ್ರಿಯೆಗಳು ಮುಂದುವರಿಯುತ್ತವೆ ಎಂದು ಹೇಳಿದರು.
Comments