ಬಿಗ್ ಬ್ರೇಕಿಂಗ್ : ವಿಧಾನಪರಿಷತ್ ಚುನಾವಣೆಗೆ ಜೆಡಿಎಸ್ ನಿಂದ ಈ ಅಭ್ಯರ್ಥಿಯನ್ನು ಅಖಾಡಕ್ಕಿಳಿಸಲು ದೊಡ್ಡಗೌಡ್ರು ಸಜ್ಜು..! ಯಾರು ಗೊತ್ತಾ?

ರಾಜ್ಯಾದ್ಯಂತ ಜೆಡಿಎಸ್ ತಮ್ಮ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಐವರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲು ಜೆಡಿಎಸ್ ಸಭೆಯಲ್ಲಿ ನಿರ್ಧರಿಸಿದೆ. ಈ ಕುರಿತು ಗುರುವಾರ ಸಂಜೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ ನಿರ್ಣಯ ಕೈಗೊಂಡಿದೆ ಎನ್ನಲಾಗಿದೆ.
ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ರಾಜ್ಯ ಜೆಡಿಎಸ್ ಅಧ್ಯಕ್ಷ ಎಚ್.ವಿಶ್ವನಾಥ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೆಲ ಮಹತ್ವದ ತೀರ್ಮಾನಗಳನ್ನು ಕೈಗೊಂಡಿದ್ದಾರೆ. ಬೆಂಗಳೂರು, ಮೈಸೂರು, ಬೆಳಗಾವಿ ಹಾಗೂ ಕಲಬುರಗಿ ಕಂದಾಯ ವಿಭಾಗಗಳಿಗೆ ತಲಾ ಒಬ್ಬರು ಹಾಗೂ ಬೆಂಗಳೂರು ನಗರಕ್ಕೆ ಒಬ್ಬರಂತೆ ಒಟ್ಟು ಐವರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲು ನಿರ್ಧರಿಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಅಕ್ಟೋಬರ್ 3ರಂದು ನಡೆಯುವ ಚುನಾವಣೆ ವೇಳೆ ಜೆಡಿಎಸ್ ನಿಂದ ಒಬ್ಬ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಕುರಿತು ಇಂದು (ಸೆ.21ರಂದು) ಪಕ್ಷದ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಅಂತಿಮ ತೀರ್ಮಾನ ಹೊರ ಬೀಳಲಿದೆ. ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಗಳಾಗಿ ನೇಮಕಗೊಂಡು ಶಿವಮೊಗ್ಗ ಲೋಕಸಭೆಯಿಂದ ಕಣಕ್ಕಿಳಿಯುವ ನಿರೀಕ್ಷೆ ಇದ್ದು, ಪರಿಷತ್‌ಗೆ ಮಾಜಿ ವಿಧಾನ ಪರಿಷತ್ ಸದಸ್ಯ ಕೆ.ರಮೇಶ್‌ಬಾಬು, ಮಾಜಿ ಶಾಸಕ ವೈ.ಎಸ್.ವಿ.ದತ್ತ, ಹಿರಿಯ ಮುಖಂಡ ನಾರಾಯಣರಾವ್, ಜೆಡಿಎಸ್ ಬೆಂಗಳೂರು ನಗರ ಅಧ್ಯಕ್ಷ ಪ್ರಕಾಶ್, ಯುವ ಘಕಟದ ಅಧ್ಯಕ್ಷ ರಮೇಶ್‌ಗೌಡ, ಕೆ.ಆರ್.ಪುರಂನ ಕೆ.ವಿ.ಅಮರನಾಥ್ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಈ ಪೈಕಿ ಒಬ್ಬರಿಗೆ ಅದೃಷ್ಟ ಒಲಿಯುವ ಲಕ್ಷಣಗಳಿವೆ. ಮಧು ಬಂಗಾರಪ್ಪ ಅವರಿಗೆ ಲೋಕಸಭೆಗೆ ಟಿಕೆಟ್ ನೀಡಿ ವೈ.ಎಸ್.ವಿ ದತ್ತ ಅವರನ್ನು ಪಕ್ಷದಲ್ಲಿಯೇ ಉಳಿಸಿಕೊಳ್ಳುವ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.
Comments