ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದ ಎಚ್.ಡಿ.ರೇವಣ್ಣ- ಡಿಕೆಶಿ ಭೇಟಿ..!ವಿಧಾನ ಪರಿಷತ್ ಚುನಾವಣೆ ಬಗ್ಗೆ ಹೇಳಿದ್ದೇನು?

ಸಚಿವ ಎಚ್.ಡಿ.ರೇವಣ್ಣ ಅವರು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾದರು. 'ನಾನೇನು ರಾಜಕೀಯ ಮಾಡಲ್ಲ ಎಲ್ಲವನ್ನು ಕುಮಾರಸ್ವಾಮಿ ನೋಡಿಕೊಳ್ಳುತ್ತಾರೆ'. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿರಲಿಲ್ಲ. ಆದ್ದರಿಂದ, ಇಂದು ಭೇಟಿಯಾಗಿದ್ದೇನೆ' ಎಂದು ಭೇಟಿಯ ಬಳಿಕ ಹೇಳಿದರು.
ಇಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರು ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದರು. ವಿಧಾನ ಪರಿಷತ್ ಚುನಾವಣೆಗೆ ರಮೇಶ್ ಗೌಡ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿದ ಬಗ್ಗೆ ಪ್ರತಿಕ್ರಿಯೆ ನೀಡಿದ ರೇವಣ್ಣ ಅವರು, 'ಅದು ಪಕ್ಷದ ನಿರ್ಧಾರ. ಮಧು ಬಂಗಾರಪ್ಪ ಅವರನ್ನು ಅಭ್ಯರ್ಥಿ ಮಾಡಬೇಕು ಎಂದು ನಿರ್ಧರಿಸಲಾಗಿತ್ತು. ಆದರೆ, ಅವರು ಹಿಂಬಾಗಿಲ ರಾಜಕಾರಣ ಮಾಡುವುದಿಲ್ಲ ಎಂದು ತಿರಸ್ಕರಿಸಿದರು. ಆದ್ದರಿಂದ, ಕೊನೆ ಕ್ಷಣದಲ್ಲಿ ರಮೇಶ್ ಗೌಡ ಅವರ ಹೆಸರು ಅಂತಿಮಗೊಳಿಸಲಾಯಿತು' ಎಂದರು.
Comments