ಇವರಿಗೆ ಒಲಿಯಲಿದ್ಯಾ ಬಿಬಿಎಂಪಿಯ ಮೇಯರ್ ಪಟ್ಟ..!!
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಮೇಯರ್ ಸ್ಥಾನಕ್ಕೆ ಸೆ.28ರಂದು ಚುನಾವಣೆ ನಿಗದಿಯಾಗಿದೆ. ಲಿಂಗಾಯತರಿಗೆ ಅವಕಾಶ ಕಲ್ಪಿಸಬೇಕೆಂಬ ಒತ್ತಡ ಕಾಂಗ್ರೆಸ್ ನಿಂದ ಹೆಚ್ಚಿದೆ.
ಈ ಕುರಿತು ವೀರಶೈವರು/ಲಿಂಗಾಯತ ಮುಖಂಡರು ಹಾಗೂ ವಿವಿಧ ಮಠಾಧೀಶರು ಕಾಂಗ್ರೆಸ್ ಪಕ್ಷದ ಉನ್ನತ ನಾಯಕರ ಮೇಲೆ ಹೆಚ್ಚಿನ ಪ್ರಭಾವ ಬೀರುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಂದಿನ ಲೋಕಸಭಾ ಚುನಾವಣೆ, ಮೈಸೂರು ವಿಭಾಗ ಮತ್ತು ಬೆಂಗಳೂರಿನಲ್ಲಿ ಪಕ್ಷ ಸಂಘಟನೆಗೆ ಅನುಕೂಲವಾಗಬೇಕಾದರೆ ಈ ಬಾರಿ ಲಿಂಗಾಯತರಿಗೆ ಮೇಯರ್ ಸ್ಥಾನವನ್ನು ನೀಡಬೇಕು ಎಂದು ಒತ್ತಾಯ ಕೇಳಿಬರುತ್ತಿದೆ. ಈ ಕುರಿತು ಮಠಾಧೀಶರು, ಕೆಲವು ಲಿಂಗಾಯತ ಮುಖಂಡರು ಸಭೆ ನಡೆಸಿದ್ದಾರೆ.ಈಗಾಗಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಜಿ ಪರಮೇಶ್ವರ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರು ಮೇಯರ್ ಚುನಾವಣೆಯಲ್ಲಿ ಲಿಂಗಾಯತರಿಗೆ ಅವಕಾಶ ನೀಡಬೇಕು ಎಂದು ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಕೂಡ ಕಾಂಗ್ರೆಸ್ ನ ರಾಜ್ಯ ಉಸ್ತುವಾರಿ ಕೆಸಿ ವೇಣುಗೋಪಾಲ್ ಅವರಿಗೆ ಮನವಿ ಮಾಡಿದ್ದಾರೆ. ಮೇಯರ್ ಚುನಾವಣೆಗೆ ಇನ್ನೂ ಎರಡೇ ದಿನ ಬಾಕಿ ಇದೆ, ಯಾರಿಗೆ ಸಿಗುತ್ತದೆ ಮೇಯರ್ ಪಟ್ಟ ಎನ್ನುವ ಕುಲೂಹಲ ಎಲ್ಲರಲ್ಲಿದೆ.
Comments