ಈ ಬಾರಿ ಕೇಂದ್ರದಲ್ಲಿ ಮೈತ್ರಿ ಸರ್ಕಾರ ಖಚಿತ..!'ಕೈ'-'ದಳ'ದ ಮಾಸ್ಟರ್ ಪ್ಲಾನ್ ಏನ್ ಗೊತ್ತಾ?

ಮುಂಬರುವ 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಳ್ಳಲು ಅಧಿಕೃತ ಒಪ್ಪಿಗೆ ಸಿಕ್ಕಿದೆ. ಜೆಡಿಎಸ್ ಜೊತೆ ಮಾತುಕತೆ ನಡೆಸಲು ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡಲಾಗಿದೆ.
ಎಐಸಿಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಶೋಕ್ ಗೆಹ್ಲೋಟ್ ನೇತೃತ್ವದಲ್ಲಿ ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಬಿಜೆಪಿ ಕೇಂದ್ರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರುವುದನ್ನು ತಡೆಯಲು ಕಾಂಗ್ರೆಸ್ ಮೈತ್ರಿ ನಿರ್ಧಾರ ಕೈಗೊಂಡಿದೆ. ಸಭೆಯ ಬಳಿಕ ಕರ್ನಾಟಕ, ಉತ್ತರ ಪ್ರದೇಶ, ತೆಲಂಗಾಣ, ಜಾರ್ಖಂಡ್, ಬಿಹಾರ ಸೇರಿದಂತೆ 10 ರಾಜ್ಯಗಳ ಪ್ರಸ್ತುತ ರಾಜಕೀಯ ಬೆಳವಣಿಗೆ ಕುರಿತು ಆಯಾ ರಾಜ್ಯಗಳ ನಾಯಕರ ಜೊತೆ ಕಾಂಗ್ರೆಸ್ ವರಿಷ್ಠರು ಪ್ರತ್ಯೇಕವಾಗಿ ಮಾತುಕತೆ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. 2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 17, ಕಾಂಗ್ರೆಸ್ 9 ಮತ್ತು ಜೆಡಿಎಸ್ 2 ಸ್ಥಾನಗಳಲ್ಲಿ ಜಯಗಳಿಸಿತ್ತು. ಆದರೆ, ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಬಳಿಕ ಬಿ.ಎಸ್.ಯಡಿಯೂರಪ್ಪ, ಶ್ರೀರಾಮುಲು ರಾಜೀನಾಮೆ ನೀಡಿದ್ದಾರೆ. ಆದ್ದರಿಂದ, ಎರಡು ಕ್ಷೇತ್ರಗಳು ತೆರವಾಗಿವೆ.
Comments