ಆಪರೇಷನ್ ಕಮಲಕ್ಕೆ ಬ್ರೇಕ್ ಹಾಕಿದ ಸಿಎಂ ಎಚ್'ಡಿಕೆ..! ಬಿಜೆಪಿಯ ಈ ಶಾಸಕರು ಸಂಪರ್ಕದಲ್ಲಿ..!!

ಬಿಜೆಪಿ ನಡೆಸುವ ಆಪರೇಷನ್ ಕಮಲಕ್ಕೆ ಹೆದರುವ ಪ್ರಶ್ನೆಯೇ ಇಲ್ಲ ಎಂದು ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ತಿರುಚೆಂಡನೂರಿನ ಮುರುಗ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ರಾಜ್ಯದಲ್ಲಿ ಬಿಜೆಪಿ ನಡೆಸುವಂತಹ ಯಾವುದೇ ಪ್ರಯತ್ನಗಳು ಫಲಿಸುವುದಿಲ್ಲ.
ಆಡಳಿತ ಪಕ್ಷದ ಶಾಸಕರನ್ನು ಸೆಳೆದು ಆಪರೇಷನ್ ಕಮಲಕ್ಕೆ ಕೈ ಹಾಕಿದರೂ ಹೆದರಬೇಕಿಲ್ಲ. ಆಡಳಿತ ಪಕ್ಷದ 18 ಶಾಸಕರು ಬಿಜೆಪಿ ನಾಯಕರ ಸಂಪರ್ಕದಲ್ಲಿದ್ದಾರೆ ಎಂಬ ಸುದ್ದಿಗಳು ಆಧಾರ ರಹಿತ. ಆಡಳಿತ ಪಕ್ಷದ ಶಾಸಕರು ಬಿಜೆಪಿಯವರು ಹೇಳುವಂತೆ ಸಂಪರ್ಕದಲ್ಲಿಲ್ಲ. ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಭಿವೃದ್ಧಿಯತ್ತ ಮುನ್ನಡೆಯುತ್ತಿದ್ದು, 5 ವರ್ಷ ಪೂರ್ಣಗೊಳಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ಆತಂಕ ಇಲ್ಲ ಎಂದು ಸ್ಪಷ್ಟಪಡಿಸಿದರು.
Comments