ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಗ್ರಾಮ ಲೆಕ್ಕಿಗ ಹುದ್ದೆಗೆ ಅರ್ಜಿಗಳನ್ನು ಸಲ್ಲಿಸಲು 25/10/2018 ಕೊನೆಯ ದಿನ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 25/10/2018 ಕೊನೆಯ ದಿನವಾಗಿದೆ. ಒಟ್ಟು 35 ಹುದ್ದೆಗಳಿದ್ದು ಆನ್ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದು. ಖುದ್ದಾಗಿ ಅಥವ ಅಂಚೆ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿಲ್ಲ ಎಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ. ಅರ್ಜಿ ಸಲ್ಲಿಸುವವರು ಪದವಿ ಪೂರ್ವ ಶಿಕ್ಷಣ ಇಲಾಖೆ ಕರ್ನಾಟಕ ಸರ್ಕಾರ ನಡೆಸುವ ದ್ವಿತೀಯ ಪಿಯುಸಿ ಅಥವ ಸಿಬಿಎಸ್ಇ/ಐಸಿಎಸ್ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಯಾವುದೇ ತತ್ಸಮಾನ ವಿದ್ಯಾರ್ಹತೆ ಪರಿಗಣನೆ ಮಾಡುವುದಿಲ್ಲ ಎಂದು ಅಧಿಸೂಚನೆ ಹೇಳಿದೆ.
ವಯೋಮಿತಿ ವಿವರ : ಅರ್ಜಿ ಸಲ್ಲಿಕೆ ಮಾಡಲು ಕನಿಷ್ಠ 18 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಎಸ್‌ಸಿ/ಎಸ್‌ಟಿ/ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷ. 2ಎ/2ಬಿ/3ಬಿ ಅಭ್ಯರ್ಥಿಗಳಿಗೆ 38 ವರ್ಷ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷದ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳು ಅಂಗವಿಕಲ, ವಿಧವೆ ಆಗಿದ್ದಲ್ಲಿ 10 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕಗಳು : ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1/ಮಾಜಿ ಸೈನಿಕ/ಮಹಿಳಾ ಅಭ್ಯರ್ಥಿಗಳಿಗೆ 100 ರೂ. ಇತರೆ ಪ್ರವರ್ಗ 2ಎ/2ಬಿ/3ಎ/3ಬಿ/ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 200 ರೂ.ಗಳು. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸುವಾಗ ನೇಮಕಾತಿ ಆದೇಶವನ್ನು ಸ್ಪಷ್ಟವಾಗಿ ಓದಿಕೊಳ್ಳುವಂತೆ ಮನವಿ ಮಾಡಲಾಗಿದೆ. ಅರ್ಜಿಗಳನ್ನು ಅಪ್ ಲೋಡ್ ಮಾಡಿದ ಬಳಿಕ ಪೇ ಆನ್‌ಲೈನ್ ಮೂಲಕ ಇಂಟರ್‌ನೆಟ್ ಬ್ಯಾಂಕಿಂಗ್, ಡೆಬಿಟ್ ಕಾರ್ಡ್ ಮೂಲಕ ಶುಲ್ಕ ಪಾವತಿ ಮಾಡಬಹುದು. ಎಸ್‌ಬಿಐನ ಯಾವುದೇ ಶಾಖೆಯಲ್ಲಿ ಸಹ ನಗದು ಪಾವತಿ ಮಾಡಬಹುದು.
http://bengalururural-va.kar.nic.in
Comments