ಮಾಜಿ ಸಚಿವ ಚೆಲುವರಾಯಸ್ವಾಮಿ ಮತ್ತು ಸಚಿವ ಸಿ ಎಸ್ ಪುಟ್ಟರಾಜು ನಡುವೆ ಬಿಗ್ ಫೈಟ್..!
ಉಪ ಚುನಾವಣೆ ಸಮೀಪಿಸುತ್ತಿರುವಂತೆಯೇ ಮೈತ್ರಿ ಸರ್ಕಾರದ ನಾಯಕರಲ್ಲಿ ಮಾತಿನ ಸಮರ ಆರಂಭವಾಗಿದೆ. ಕಾಂಗ್ರೆಸ್ ನ ಮಾಜಿ ಸಚಿವ ಚೆಲುವರಾಯಸ್ವಾಮಿ, ಮಂಡ್ಯ ಲೋಕಸಭಾ ಕ್ಷೇತ್ರವನ್ನು ಯಾವುದೇ ಕಾರಣಕ್ಕೂ ಜೆಡಿಎಸ್ ಗೆ ಬಿಟ್ಟು ಕೊಡುವುದಿಲ್ಲವೆಂದು ಹೇಳಿದಕ್ಕೆ ಸಚಿವ ಸಿ.ಎಸ್. ಪುಟ್ಟರಾಜು ತಿರುಗೇಟು ನೀಡಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡುವಂತೆ ನಾವೇನು ಕಾಂಗ್ರೆಸ್ ನವರ ಮುಂದೆ ಗೋಗರೆಯುತ್ತಿಲ್ಲ. ಮಂಡ್ಯ ಜಿಲ್ಲೆ ಜೆಡಿಎಸ್ ನ ಭದ್ರ ಕೋಟೆ ಎಂಬುದನ್ನು ಎಲ್ಲರು ತಿಳಿದಿದ್ದರೆ, ಬಿಜೆಪಿಯನ್ನು ದೂರವಿಡಲೆಂದು ರಾಜ್ಯದಲ್ಲಿ ಅನಿವಾರ್ಯವಾಗಿ ಮೈತ್ರಿ ಮಾಡಿಕೊಳ್ಳಲಾಗಿದೆ. ಮಂಡ್ಯ ಲೋಕಸಭೆ ಉಪ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವುದರ ಬಗ್ಗೆ ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ ಸ್ವಗ್ರಾಮ ಚಿನಕುರಳಿಯಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಸಚಿವ ಸಿ.ಎಸ್. ಪುಟ್ಟರಾಜು ಮಾತನಾಡಿದರೆ.
Comments