ಮಂಡ್ಯ ಲೋಕಸಭಾ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಹೆಚ್.ಡಿ.ದೇವೇಗೌಡರು ಸೂಚಿಸಿದ್ದು ಯಾರನ್ನ ಗೊತ್ತಾ..?

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಅವರನ್ನು ಕಣಕ್ಕಿಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ದೇವೆಗೌಡರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮಧುಬಂಗಾರಪ್ಪ ಅವರನ್ನು ಅಭ್ಯರ್ಥಿಯಾಗಲು ಒಂದು ವೇಳೆ ಒಪ್ಪದಿದ್ದರೆ ಕಾಂಗ್ರೆಸ್ ಜೊತೆ ಚರ್ಚೆ ಮಾಡಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ ಎಂದು ತಿಳಿಸಿದರು. ರಾಜ್ಯದಲ್ಲಿ ನಡೆಯುವ ಐದು ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಜೊತೆ ಸೇರಿ ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ. ಈ ವಿಷಯವಾಗಿ ಈಗಾಗಲೇ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ, ಪರಮೇಶ್ವರ್, ದಿನೇಶ್ ಗುಂಡೂರಾವ್ ಜೊತೆ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
Comments