ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರನ್ನು ಭೇಟಿ ಮಾಡಿದ ಹ್ಯಾಟ್ರಿಕ್ ಹೀರೋ ಶಿವಣ್ಣ..! ಕಾರಣ ಏನ್ ಗೊತ್ತಾ..?
ಸ್ಯಾಂಡಲ್ ವುಡ್ ನ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಚಿನ್ನೇಗೌಡರು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರನ್ನ ಗುರುವಾರ ವಿಧಾನಸೌಧದಲ್ಲಿ ಭೇಟಿಯಾಗಿದ್ದಾರೆ.
ಪೋಸ್ಟರ್ ಜಾಹೀರಾತು ನಿಷೇಧದಿಂದ ಚಿತ್ರ ಪ್ರಚಾರಕ್ಕೆ ಅಡ್ಡಿಯಾಗುತ್ತಿದೆ. ಹೀಗಾಗಿ, ಸಿನಮಾ ಪೋಸ್ಟರ್ ಗಳನ್ನು ಅಂಟಿಸುವ ಅವಕಾಶ ಮಾಡಿಕೊಡಬೇಕೆಂದು ಶಿವರಾಜ್ ಕುಮಾರ್ ಮುಖ್ಯಮಂತ್ರಿ ಕುಮಾರಸ್ವಾಮಿಯ ಬಳಿ ಮನವಿ ಮಾಡಿಕೊಂಡಿದ್ದಾರೆ. ಶಿವರಾಜ್ ಕುಮಾರ್ ಮತ್ತು ಸುದೀಪ್ ಅಭಿನಯದ 'ದಿ ವಿಲನ್' ಸಿನಿಮಾ ಅಕ್ಟೋಬರ್ 18 ರಂದು ಬಿಡುಗಡೆಯಾಗುತ್ತಿದೆ. ಹೀಗಾಗಿ, ಈ ಸಿನಿಮಾದ ಪೋಸ್ಟರ್ ಗಳನ್ನ ಹಾಕಲು ನಿರ್ದಿಷ್ಟವಾದ ಜಾಗ ಕೊಡಿ ಎಂದು ಮನವಿಯನ್ನು ಮಾಡಿದ್ದಾರೆ ಎನ್ನಲಾಗಿದೆ. ಸಿಎಂ ಕುಮಾರಸ್ವಾಮಿ ಭೇಟಿಯ ನಂತರ ಮಾತನಾಡಿದ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಚಿನ್ನೇಗೌಡ, 'ಸಿನಿಮಾ ಪ್ರಚಾರಕ್ಕಾಗಿ ನಿರ್ದಿಷ್ಟವಾದ ಸ್ಥಳಗಳಲ್ಲಿ ಪೋಸ್ಟರ್ ಹಾಕಲು ಅವಕಾಶ ಮಾಡಿಕೊಡಿ ಎಂದು ಮನವಿ ಸಲ್ಲಿಸಿದ್ದೇವೆ. ಬಿಬಿಎಂಪಿ ಕಮೀಷನರ್ ಬಳಿ ಮಾತನಾಡಿ ಚರ್ಚೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಭರವಸೆಯನ್ನು ನೀಡಿದ್ದಾರೆ ಎಂದು ಹೇಳಿದ್ದಾರೆ
Comments